Rajya Sabha ಅಡ್ಡಮತ; ಉ.ಪ್ರ.: 8ರಲ್ಲಿ ಬಿಜೆಪಿ, 2ರಲ್ಲಿ ಎಸ್‌ಪಿಗೆ ಜಯ
ಅಡ್ಡಮತ ಹಾಕಿದ ಎಸ್‌ಪಿಯ 8 ಶಾಸಕರು
Team Udayavani, Feb 28, 2024, 1:11 AM IST
ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ಹಿಮಾಚಲ ಪ್ರದೇಶಗಳಲ್ಲಿ ರಾಜ್ಯಸಭೆ ಚುನಾವಣೆ ವೇಳೆ ಅಡ್ಡ ಮತದಾನ ನಡೆದಿದೆ. ಎಸ್‌ಪಿಯ 8 ಶಾಸಕರು ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದ್ದಾರೆ ಎಂದು ಹೇಳಲಾಗಿದೆ.
ಒಟ್ಟು 10 ಸ್ಥಾನಗಳ ಪೈಕಿ 8 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. 2 ಕ್ಷೇತ್ರಗಳಲ್ಲಿ ಎಸ್‌ಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
ಇನ್ನೊಂದೆಡೆ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ ಸರಕಾರಕ್ಕೆ 25 ಶಾಸಕರ ಬಲ ಇದ್ದರೂ ಪಕ್ಷದ ಅಭ್ಯರ್ಥಿ ಅಭಿಷೇಕ್ ಮನುಸಿಂ Ì ಸೋತಿದ್ದಾರೆ. ಬಿಜೆಪಿಯ ಅಭ್ಯರ್ಥಿ ಹರ್ಷ ಮಹಾಜನ್ ಜಯ ಸಾಧಿಸಿದ್ದಾರೆ.
ಹಿಮಾಚಲ ಸರಕಾರ ವಿರುದ್ಧ ಬಿಜೆಪಿ ಅವಿಶ್ವಾಸ?
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ನ 9 ಶಾಸಕರು ಬಿಜೆಪಿಯ ರಾಜ್ಯಸಭಾ ಅಭ್ಯರ್ಥಿಗೆ ಮತ ಹಾಕಿದ್ದಾರೆ. ಹೀಗಾಗಿ ವಿಪಕ್ಷ ಬಿಜೆಪಿ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ನಿರ್ಧರಿಸಿದೆ ಎನ್ನಲಾಗಿದೆ. ಈ ಮೂಲಕ ಅಡ್ಡ ಮತದಾನದಿಂದ ಉಂಟಾಗಿರುವ ರಾಜಕೀಯ ಸನ್ನಿವೇಶವನ್ನು ತನಗೆ ಅನುಕೂಲಕರವಾಗಿ ಪರಿವರ್ತಿಸಲು ಬಿಜೆಪಿ ಮುಂದಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.