Delhi CM ಕೇಜ್ರಿವಾಲ್ ನಿವಾಸದಲ್ಲಿ 15 ಬಾತ್ ರೂಮ್‌ಗಳು…; ಡಾ. ಸುಧಾಂಶು ವಾಗ್ದಾಳಿ
Team Udayavani, Aug 7, 2023, 4:28 PM IST
ಹೊಸದಿಲ್ಲಿ: “ರಾಷ್ಟ್ರೀಯ ರಾಜಧಾನಿ ವ್ಯಾಪ್ತಿ ದೆಹಲಿ (ತಿದ್ದುಪಡಿ) ವಿಧೇಯಕ 2023′ ಕುರಿತು ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಸಂಸದರ ನಡುವೆ ಕಲಾಪದಲ್ಲಿ ವಾಕ್ಸಮರ ಮುಂದುವರಿದಿದ್ದು, ಸೋಮವಾರ ಬಿಜೆಪಿ ಸಂಸದ ಡಾ. ಸುಧಾಂಶು ತ್ರಿವೇದಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ದೆಹಲಿಯಲ್ಲಿ ಸೇವೆಗಳ ನಿಯಂತ್ರಣಕ್ಕಾಗಿ ಸುಗ್ರೀವಾಜ್ಞೆಯನ್ನು ಬದಲಿಸುವ ಮಸೂದೆಯನ್ನು ರಾಜ್ಯಸಭೆಯಲ್ಲಿ ಪರಿಗಣನೆಗೆ ಮತ್ತು ಅಂಗೀಕರಿಸಲು ಕೇಳಿಕೊಂಡರು.
ಡಾ. ಸುಧಾಂಶು ತ್ರಿವೇದಿ ರಾಜ್ಯಸಭೆಯಲ್ಲಿ ಮಾತನಾಡಿ, “2013 ರಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಆಗಿನ ಸಿಎಂ ಶೀಲಾ ದೀಕ್ಷಿತ್ ಅವರ ನಿವಾಸದಲ್ಲಿ 10 ಏರ್ ಕಂಡಿಷನರ್‌ಗಳು ಮತ್ತು ಬಾತ್ ರೂಮ್‌ನಲ್ಲಿಯೂ ಸಹ ಎಸಿ ಇತ್ತು ಎಂದು ಟ್ವೀಟ್ ಮಾಡಿ ವಿದ್ಯುತ್ ಬಿಲ್‌ಗೆ ಯಾರು ಪಾವತಿಸಿದ್ದಾರೆ ಎಂದು ಕೇಳಿದ್ದರು. ಈಗ ಮುಖ್ಯಮಂತ್ರಿ ಕೇಜ್ರಿವಾಲ್ ಅವರ ನಿವಾಸದಲ್ಲಿ, 15 ಸ್ನಾನಗೃಹಗಳು ಮತ್ತು ತಲಾ 1 ಕೋಟಿ ರೂ. ಮೌಲ್ಯದ ಪರದೆಗಳು ಇವೆ ಎಂದು ಹೇಳಿಕೆ ನೀಡಿದ್ದಾರೆ.
105 ಪುಟಗಳ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ, ದೆಹಲಿಯ ಮೇಲೆ ಕಾನೂನು ಜಾರಿಗೆ ತರುವುದರ ವಿರುದ್ಧ ಎಲ್ಲಿಯೂ ಏನನ್ನೂ ಉಲ್ಲೇಖಿಸಲಾಗಿಲ್ಲ. ಸುಪ್ರೀಂ ಕೋರ್ಟ್ ಆದೇಶದಲ್ಲಿ, ಪ್ಯಾರಾ 86, 95 ಮತ್ತು 164 F ನಲ್ಲಿ, ಸಂಸತ್ತಿಗೆ ದೆಹಲಿಗೆ ಕಾನೂನು ರೂಪಿಸಲು ಎಲ್ಲಾ ಹಕ್ಕುಗಳಿವೆ ಎಂದು ಉಲ್ಲೇಖಿಸಲಾಗಿದೆ ಎಂದು ತ್ರಿವೇದಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.