ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಭಕ್ತರಿಗೆ ವೀಕ್ಷಿಸಲು ಸಾಧ್ಯವಿಲ್ಲ, ಯಾಕೆ?
ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದು, ಅಂದಾಜು 75 ದಿನಗಳೊಳಗೆ ಉತ್ಖನನ ಕಾರ್ಯ ಪೂರ್ಣ
Team Udayavani, Feb 4, 2021, 12:05 PM IST
ನವದೆಹಲಿ: ಸುಪ್ರೀಂಕೋರ್ಟ್ ಆದೇಶದಂತೆ ಶ್ರೀರಾಮ್ ಜನ್ಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ಆಶ್ರಯದಲ್ಲಿ ಪವಿತ್ರ ನಗರಿ ಅಯೋಧ್ಯೆಯಲ್ಲಿ ಬೃಹತ್ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಆದರೆ ರಾಮಮಂದಿರ ನಿರ್ಮಾಣ ಕಾರ್ಯ ವೀಕ್ಷಿಸಲು ಭಕ್ತರಿಗೆ ಸಾಧ್ಯವಿಲ್ಲ ಎಂದು ಟ್ರಸ್ಟ್ ತಿಳಿಸಿದೆ.
ಇದನ್ನೂ ಓದಿ:ತಡರಾತ್ರಿ ವಿಧಾನಸೌಧದ ಕಚೇರಿಯಲ್ಲಿ ಹೋಮ-ಹವನ ಮಾಡಿಸಿದ ಸಚಿವ ಎಸ್.ಅಂಗಾರ
ನಿರ್ಮಾಣ ಕಾರ್ಯ ವೀಕ್ಷಿಸಲು ಯಾಕೆ ಸಾಧ್ಯವಿಲ್ಲ?
ರಾಮ್ ಜನ್ಮಭೂಮಿ ತೀರ್ಥ್ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಈ ಕುರಿತು ಮಾಹಿತಿ ನೀಡಿದ್ದು, ಭದ್ರತೆಯ ಕಾರಣದಿಂದಾಗಿ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯವನ್ನು ವೀಕ್ಷಿಸಲು ರಾಮ ಭಕ್ತರಿಗೆ ಸಾಧ್ಯವಾಗುವುದಿಲ್ಲ ಎಂದು ವಿವರಿಸಿದ್ದಾರೆ.
ರಾಮ ಮಂದಿರ ನಿರ್ಮಾಣ ಸ್ಥಳದಲ್ಲಿ ಯಾವುದೇ ಅವಘಡಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುವ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಮಂದಿರ ನಿರ್ಮಾಣದಲ್ಲಿ ತೊಡಗಿರುವ ಇಂಜಿನಿಯರ್ ಗಳು ಬೃಹತ್ ಕ್ರೇನ್ಸ್ ಗಳನ್ನು ಉಪಯೋಗಿಸುತ್ತಿರುವುದಾಗಿ ರಾಯ್ ತಿಳಿಸಿದ್ದಾರೆ.
ಇದನ್ನೂ ಓದಿ:ಜಮ್ಮು-ಕಾಶ್ಮೀರ: ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಗುಂಡಿನ ದಾಳಿ; ಯೋಧ ಹುತಾತ್ಮ
ಈ ದೃಷ್ಟಿಕೋನದ ನಿಟ್ಟಿನಲ್ಲಿಯೂ ರಾಮಮಂದಿರ ನಿರ್ಮಾಣವಾಗುತ್ತಿರುವ ಸ್ಥಳಕ್ಕೆ ಭಕ್ತರು ಭೇಟಿ ನೀಡಲು ಅವಕಾಶ ನೀಡದಿರಲು ನಿರ್ಧಾರ ತೆಗೆದುಕೊಂಡಿದ್ದೇವೆ. ಇಂತಹ ಸನ್ನಿವೇಶದಲ್ಲಿ ಭಕ್ತರಿಗೆ ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಹೋಗುವುದನ್ನು ನಿರ್ಬಂಧಿಸುವ ಮೂಲಕ ಆಕಸ್ಮಿಕವಾಗಿ ಸಂಭವಿಸುವ ಘಟನೆಗಳನ್ನು ತಡೆಯಬಹುದಾಗಿದೆ ಎಂದು ರಾಯ್ ವಿವರಿಸಿದ್ದಾರೆ.
ಈ ಮೊದಲು ರಾಮಮಂದಿರ ನಿರ್ಮಾಣ ಕಾರ್ಯವನ್ನು ನಿಗದಿತ ಸ್ಥಳದಿಂದ ವೀಕ್ಷಿಸಲು ರಾಮ ಭಕ್ತರಿಗೆ ಅವಕಾಶ ನೀಡಲು ಟ್ರಸ್ಟ್ ಒಪ್ಪಿಗೆ ನೀಡಿತ್ತು. ಆದರೆ ಈಗ ಅದು ಸಾಧ್ಯವಿಲ್ಲ. ಆದರೂ ರಾಮಮಂದಿರ ನಿರ್ಮಾಣ ಕಾರ್ಯದ ವಿವರವನ್ನು ಭಕ್ತರಿಗೆ ಮಾಧ್ಯಮದ ಮೂಲಕ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇವೆಲ್ಲವುಗಳ ನಡುವೆ ಮುಖ್ಯವಾಗಿ ಭದ್ರತಾ ಕಾರಣದಿಂದಾಗಿ ರಾಮಮಂದಿರ ನಿರ್ಮಾಣ ಕಾರ್ಯ ವೀಕ್ಷಣೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದಿರುವ ಟ್ರಸ್ಟ್, ಈಗಾಗಲೇ ಲಾರ್ಸನ್ ಆ್ಯಂಡ್ ಟರ್ಬೊ ಕಂಪನಿ ಮತ್ತು ಇಂಜಿನಿಯರ್ ಗಳು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದು, ಅಂದಾಜು 75 ದಿನಗಳೊಳಗೆ ಉತ್ಖನನ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದೆ.
ರಾಮಮಂದಿರ ಫೌಂಡೇಶನ್ ಕೆಲಸ ಏಪ್ರಿಲ್ ನಿಂದ ಆರಂಭವಾಗಲಿದೆ ಎಂದು ತಿಳಿಸಿರುವ ಕಂಪನಿ, ಮಂದಿರದ ಮೊದಲ ಮಹಡಿ ಕಾರ್ಯ ಮುಂದಿನ ಒಂದೂವರೆ ವರ್ಷದೊಳಗೆ ಆರಂಭಿಸಲಾಗುವುದು ಎಂದು ತಿಳಿಸಿದೆ. ಸಂಪೂರ್ಣ ರಾಮಮಂದಿರ ನಿರ್ಮಾಣ ಕಾರ್ಯ 36-40 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.