ದ್ರೌಪದಿ ಮುರ್ಮು ಬಗ್ಗೆ ಟ್ವೀಟ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ರಾಮ್ ಗೋಪಾಲ್ ವರ್ಮಾ

Team Udayavani, Jun 26, 2022, 10:09 AM IST

Ram Gopal Varma in trouble over controversial tweet on Droupadi Murmu

ಹೊಸದಿಲ್ಲಿ: ಪದೇ ಪದೇ ವಿವಾದಾತ್ಮಕ ಟ್ವೀಟ್ ಮಾಡುವ ಮೂಲಕ ಸಂಕಷ್ಟಕ್ಕೆ ಸಿಲುಕುವ ಚಿತ್ರ ನಿರ್ಮಾಪಕ ರಾಮ್ ಗೋಪಾಲ್ ವರ್ಮಾ ಅವರು ಇದೀಗ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಬಿಜೆಪಿಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಕುರಿತು ‘ಮಹಾಭಾರತ’ ಉಲ್ಲೇಖವಿರುವ ವಿವಾದಾತ್ಮಕ ಟ್ವೀಟ್‌ಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ದ್ರೌಪದಿಯು ರಾಷ್ಟ್ರಪತಿಯಾಗಿದ್ದರೆ ಪಾಂಡವರು ಯಾರು? ಮತ್ತು ಮುಖ್ಯವಾಗಿ ಕೌರವರು ಯಾರು?” ಎಂದು ಆರ್.ಜಿ.ವಿ ಟ್ವೀಟ್ ಮಾಡಿದ್ದು, ವಿವಾದ ರೂಪ ಪಡೆದಿದೆ.

ತೆಲಂಗಾಣ ಬಿಜೆಪಿ ನಾಯಕ ಗುಡೂರು ನಾರಾಯಣ ರೆಡ್ಡಿ ಅವರು ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ವರ್ಮಾ ವಿರುದ್ಧ ದೂರು ದಾಖಲಿಸಿದ್ದಾರೆ. “ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ನಮಗೆ ಭರವಸೆ ನೀಡಿದ್ದಾರೆ, ಅದರ ನಂತರ, ಅವರು ಮತ್ತೆ ಟ್ವೀಟ್ ಅಥವಾ ಯಾರ ವಿರುದ್ಧವೂ ಇಂತಹ ಅಸಹ್ಯ ಹೇಳಿಕೆ ನೀಡುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದು ರೆಡ್ಡಿ ಹೇಳಿದರು.

ಇದನ್ನೂ ಓದಿ:ನಾಲೆಗೆ ಬಿದ್ದ ಕೂಲಿ ಕೆಲಸಗಾರರಿದ್ದ ಕ್ರೂಸರ್: ಸ್ಥಳದಲ್ಲೇ ಏಳು ಜನರ ಸಾವು, ಮೂವರು ಗಂಭೀರ

ತನ್ನ ಟ್ವೀಟ್ ವಿವಾದ ರೂಪ ಪಡೆಯುತ್ತಿದ್ದಂತೆ ಆರ್.ಜಿ.ವಿ ಸ್ಪಷ್ಟನೆ ನೀಡಿದ್ದಾರೆ. “ಮಹಾಭಾರತದಲ್ಲಿ ದ್ರೌಪದಿ ನನ್ನ ನೆಚ್ಚಿನ ಪಾತ್ರವಾಗಿದೆ. ಆದರೆ ಹೆಸರು ಅಪರೂಪವಾಗಿರುವುದರಿಂದ ನಾನು ಅದಕ್ಕೆ ಸಂಬಂಧಿಸಿದ ಪಾತ್ರಗಳನ್ನು ನೆನಪಿಸಿಕೊಂಡಿದ್ದೇನೆ. ಯಾರ ಭಾವನೆಗಳಿಗೂ ಧಕ್ಕೆ ತರುವ ಉದ್ದೇಶವಿಲ್ಲ” ಎಂದಿದ್ದಾರೆ.

ತೆಲಂಗಾಣದ ಮತ್ತೊಬ್ಬ ಬಿಜೆಪಿ ಶಾಸಕ ರಾಮ್ ಗೋಪಾಲ್ ವರ್ಮಾ ಅವರನ್ನು ಟೀಕಿಸಿದ್ದು, ನಿರ್ದೇಶಕರು “ಕುಡಿದು ನಶೆಯ ಸ್ಥಿತಿಯಲ್ಲಿ ಇಂತಹ ಟ್ವೀಟ್‌ಗಳನ್ನು ಪೋಸ್ಟ್ ಮಾಡುತ್ತಾರೆ ಎಂದು ಹೇಳಿದ್ದಾರೆ. ಇಂತಹ ವಿವಾದಾತ್ಮಕ ಕಾಮೆಂಟ್‌ ಗಳನ್ನು ಮಾಡುವ ಮೂಲಕ ವರ್ಮಾ ಯಾವಾಗಲೂ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಾರೆ” ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.