ವಾದ ಮಂಡಿಸಲ್ಲ, 2 ಕೋಟಿ ಶುಲ್ಕ ಕೊಡಿ; ಕೇಜ್ರಿವಾಲ್ ಗೆ ಜೇಠ್ಮಲಾನಿ
Team Udayavani, Jul 26, 2017, 5:50 PM IST
ನವದೆಹಲಿ: ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಹಾಕಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ತಾನು ಕೇಜ್ರಿವಾಲ್ ಪರ ವಾದ ಮಂಡಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಹಿರಿಯ ವಕೀಲರಾದ ರಾಮ್ ಜೇಠ್ಮಲಾನಿ ತಿಳಿಸಿದ್ದಾರೆ.
ಅಷ್ಟೇ ಅಲ್ಲ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಾದ ಮಂಡಿಸಿದ್ದಕ್ಕೆ 2 ಕೋಟಿ ರೂಪಾಯಿ ಬಾಕಿ ಶುಲ್ಕವನ್ನು ಪಾವತಿಸುವಂತೆ ಜೇಠ್ಮಲಾನಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸೂಚಿಸಿದ್ದಾರೆ.
ಮೇ 17ರಂದು ನಡೆದ ವಿಚಾರಣೆ ವೇಳೆ ಅರುಣ್ ಜೇಟ್ಲಿ ವಿರುದ್ಧ ಅವಹೇಳನಕಾರಿಯಾದ ಶಬ್ದ ಬಳಸುವಂತೆ ನಾನು ಯಾವುದೇ ರೀತಿಯಲ್ಲೂ ನನ್ನ ಪರ ವಕೀಲರಾದ ಜೇಠ್ಮಲಾನಿ ಅವರಿಗೆ ಸೂಚಿಸಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಬುಧವಾರ ದೆಹಲಿ ಹೈಕೋರ್ಟ್ ಗೆ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ವೈದ್ಯನ ಕೊಲೆಗೈದು ನದಿಗೆ ಎಸೆದಿದ್ದ ಹಂತಕರು!
Bengaluru: ಕರ್ತವ್ಯಕ್ಕೆ ತನ್ನ ಬದಲಿಗೆ ಮಗನನ್ನು ಕಳುಹಿಸಿದ ಮಹಿಳಾ ನೌಕರೆ ಅಮಾನತು
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.