ಜೈಲಿನಿಂದ ಹೊರಬಂದು ತಲವಾರಿನಲ್ಲಿ ಕೇಕ್ ಕಟ್ ಮಾಡಿದ ರಾಮ್ ರಹೀಮ್: ವೈರಲ್ ವಿಡಿಯೋ
Team Udayavani, Jan 24, 2023, 11:10 AM IST
ಹೊಸದಿಲ್ಲಿ: ಪ್ರಸ್ತುತ ಪೆರೋಲ್ ಮೇಲೆ ಹೊರಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಅವರು ತಲಾವಾರಿನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ ಘಟನೆ ನಡೆದಿದೆ.
ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಶನಿವಾರ ಹರಿಯಾಣದ ರೋಹ್ಟಕ್ ಜಿಲ್ಲೆಯ ಸುನಾರಿಯಾ ಜೈಲಿನಿಂದ 40 ದಿನಗಳ ಪೆರೋಲ್ ಪಡೆದು ಹೊರಬಂದರು. ಅಲ್ಲಿಮದ ಉತ್ತರ ಪ್ರದೇಶದ ಬಾಗ್ಪತ್ನಲ್ಲಿರುವ ಅವರ ಬರ್ನಾವಾ ಆಶ್ರಮಕ್ಕೆ ಆಗಮಿಸಿದರು. ರಾಮ್ ರಹೀಮ್ ಅವರು ಬೃಹತ್ ಕೇಕ್ ನೊಂದಿಗೆ ಸಂಭ್ರಮಾಚರಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಮಲೆನಾಡಿನಲ್ಲಿ ಮತ್ತೆ ಕೆಎಫ್ ಡಿ ಭೀತಿ: ಕೊಪ್ಪದ ವ್ಯಕ್ತಿಗೆ ಮಂಗನ ಕಾಯಿಲೆ ಪತ್ತೆ
ಜಾಮೀನು ಅರ್ಜಿಯಲ್ಲಿ ರಾಮ್ ರಹೀಮ್ ಅವರು ಜನವರಿ 25 ರಂದು ಮಾಜಿ ಡೇರಾ ಮುಖ್ಯಸ್ಥ ಷಾ ಸತ್ನಾಮ್ ಸಿಂಗ್ ಅವರ ಜನ್ಮ ವಾರ್ಷಿಕೋತ್ಸವದ ಸಮಾರಂಭದಲ್ಲಿ ಭಾಗವಹಿಸಲು ಬಯಸುವುದಾಗಿ ಹೇಳಿದ್ದಾರೆ.
“ಐದು ವರ್ಷಗಳ ಬಳಿಕ ನನಗೆ ಇಂತಹ ಅವಕಾಶ ಸಿಕ್ಕಿದೆ. ಹೀಗಾಗಿ ಕನಿಷ್ಠ ಐದು ಕೇಕ್ ಆದರೂ ಕಟ್ ಮಾಡಬೇಕು” ಎಂದು ರಾಮ್ ರಹೀಮ್ ಅವರು ಹೇಳಿರುವುದು ವೈರಲ್ ವಿಡಿಯೋದಲ್ಲಿ ದಾಖಲಾಗಿದೆ.
ಕಳೆದ 14 ತಿಂಗಳಲ್ಲಿ ಇದು ನಾಲ್ಕನೇ ಬಾರಿ ಮತ್ತು ಮೂರು ತಿಂಗಳೊಳಗೆ ಎರಡನೇ ಬಾರಿಗೆ ರಾಮ್ ರಹೀಮ್ಗೆ ಪೆರೋಲ್ ನೀಡಲಾಗಿದೆ. ಇದಕ್ಕೂ ಮೊದಲು, ಹರಿಯಾಣ ಪಂಚಾಯತ್ ಚುನಾವಣೆ ಮತ್ತು ಆದಂಪುರ ವಿಧಾನಸಭಾ ಉಪಚುನಾವಣೆಗೆ ಮುಂಚಿತವಾಗಿ ಅವರನ್ನು ಅಕ್ಟೋಬರ್ 2022 ರಲ್ಲಿ 40 ದಿನಗಳ ಕಾಲ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.