26ಕ್ಕೆ ರಾಮಾಯಣ ಟ್ಯಾಬ್ಲೋ
Team Udayavani, Jan 5, 2018, 6:00 AM IST
ನವದೆಹಲಿ: ಈ ತಿಂಗಳ 26ರಂದು ದೇಶಕ್ಕೆ 69ನೇ ಗಣರಾಜ್ಯ ದಿನದ ಸಂಭ್ರಮ. ವಿಶೇಷವೆಂದರೆ, ಈ ಬಾರಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಆಸಿಯಾನ್ -ಇಂಡಿಯಾ ಟ್ಯಾಬ್ಲೋ ಪ್ರಮುಖ ಆಕರ್ಷಣೆಯಾಗುವ ಸಾಧ್ಯತೆಗಳಿವೆ. ಇದರಲ್ಲಿ ರಾಮಾಯಣದ ದೃಶ್ಯವನ್ನು ಕಲಾವಿದರು ಅಭಿನಯಿಸಲಿದ್ದಾರೆ.
ಹತ್ತು ಆಸಿಯಾನ್ ರಾಷ್ಟ್ರಗಳ ರಾಷ್ಟ್ರಪತಿ, ಪ್ರಧಾನಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಗಣರಾಜ್ಯ ದಿನದಲ್ಲಿ ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ಹಿಂದಿನ ಭದ್ರತೆ ಮತ್ತು ವಸತಿ ಸಿದ್ಧತೆಗಳಿಗಿಂತ ಭಿನ್ನವಾದ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ. ಸರ್ಕಾರಿ ನಾಯಕರು ವೇದಿಕೆಯಲ್ಲಿ ಕುಳಿತುಕೊಳ್ಳುವುದಕ್ಕಾಗಿ ಕೇಂದ್ರ ಲೋಕೋಪಯೋಗಿ ಇಲಾಖೆ 95 ಅಡಿ ಅಗಲದ ವೇದಿಕೆ ಸಿದ್ಧಪಡಿಸುತ್ತಿದೆ. ಕಳೆದ ವರ್ಷದ ವರೆಗೆ 40 ಅಡಿಯ ವೇದಿಕೆ ಇತ್ತು. ಅದೇ ಸಂದರ್ಭದಲ್ಲಿ ಇಂಡಿಯಾ- ಆಸಿಯಾನ್ ದೇಶಗಳ ಮೈತ್ರಿಕೂಟಕ್ಕೆ 25 ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಆಸಿ ಯಾನ್ ರಾಷ್ಟ್ರಗಳ ಸಮಾವೇಶ ನವದೆಹಲಿ ಯಲ್ಲಿ ನಡೆಯಲಿದೆ. ಪೂರ್ವದತ್ತ ನೋಟ (ಲುಕ್ ಈಸ್ಟ್ ಪಾಲಿಸಿ) ಎಂಬ ನಿಲುವಿಗೆ ತಕ್ಕಂತೆ ಕಾರ್ಯ ಕ್ರಮ ಆಯೋ ಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ದೇಶದ ಈಶಾನ್ಯ ರಾಜ್ಯಗಳ ಅಭಿವೃದ್ಧಿ, ಆಸಿಯಾನ್ ರಾಷ್ಟ್ರಗಳ ಜತೆ ವ್ಯಾಪಾರ- ವಾಣಿಜ್ಯ ಮತ್ತು ಇತರ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗಾಗಿ ಹಲವು ಒಪ್ಪಂದಗಳಿಗೂ ಸಹಿ ಹಾಕಲಾಗುತ್ತದೆ ಎಂದು “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಪ್ರತ್ಯೇಕ ಆಗಮನ: ಹತ್ತು ಮಂದಿ ಆಸಿಯಾನ್ ನಾಯಕರು ಪ್ರತ್ಯೇಕವಾಗಿ ಗಣರಾಜ್ಯ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಲಿದ್ದಾರೆ. ಸಿಂಗಾಪುರ ಪ್ರಧಾನಮಂತ್ರಿ ಲೀ ಹೀಸನ್ ಲೂಂಗ್ ಆಸಿಯಾನ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.