500 ಕೋ ರೂ. ವೆಚ್ಚದಲ್ಲಿ ಅದ್ದೂರಿ ‘ರಾಮಾಯಣ’
Team Udayavani, May 12, 2017, 1:30 AM IST
ಮುಂಬಯಿ: ಸಾವಿರ ಕೋಟಿ ರೂ. ವೆಚ್ಚದಲ್ಲಿ ಮಹಾಭಾರತ ಸಿನಿಮಾ ತಯಾರಾಗಲಿರುವ ವಿಚಾರ ನಿಮಗೆ ತಿಳಿದಿರಬಹುದು. ಅದೇ ರೀತಿ ಈಗ 500 ಕೋಟಿ ರೂ. ವೆಚ್ಚದಲ್ಲಿ ರಾಮಾಯಣ ಸಿನಿಮಾ ಕೂಡ ಸೆಟ್ಟೇರಲಿದೆ. ಇದಕ್ಕಾಗಿ ತೆಲುಗು ನಿರ್ಮಾಪಕ ಅಲ್ಲು ಅರವಿಂದ್, ನಮಿತ್ ಮಲ್ಹೋತ್ರಾ ಹಾಗೂ ಮಧು ಮಂಟೇನಾ ಕೈಜೋಡಿಸಿದ್ದಾರೆ. ಈ ವಿಷಯವನ್ನು ನಿರ್ಮಾಪಕರಾಗಿರುವ ಮಧು, ನಮಿತ್ ಹಾಗೂ ಅಲ್ಲು ಅರವಿಂದ್ ಖಚಿತಪಡಿಸಿದ್ದಾರೆ. ಚಿತ್ರ ಮೂರು ಭಾಗಗಳಲ್ಲಿ ತಯಾರಾಗಲಿದ್ದು, ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿ ಏಕಕಾಲದಲ್ಲಿ ನಿರ್ಮಾಣವಾಗಲಿದೆ. ಈ ಮೂರೂ ಮಂದಿ ಈಗಾಗಲೇ ಸ್ಕ್ರಿಪ್ಟ್ ಕೆಲಸವನ್ನು ಬಹುತೇಕ ಮುಗಿಸಿದ್ದಾರೆ. ಪಾತ್ರಗಳಿಗೆ ನಟರ ಆಯ್ಕೆ ಇನ್ನೂ ಬಾಕಿ ಇದೆ. ಬಹುತೇಕ ತೆಲುಗು, ತಮಿಳು ಮತ್ತು ಬಾಲಿವುಡ್‌ನ ಸ್ಟಾರ್ ನಟರೇ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ರಮಾನಂದ ಸಾಗರ್ ಅವರು 1987ರಲ್ಲಿ ‘ರಾಮಾಯಣ’ ಕಥೆಯನ್ನು ಕಿರುತೆರೆಗೆ ತಂದಿದ್ದರು. ಅಲ್ಲಿ ಅರುಣ್ ಗೋವಿಲ್ ಮತ್ತು ದೀಪಿಕಾ ಚಿಖಾಲಿಯಾ ರಾಮ ಮತ್ತು ಸೀತೆಯಾಗಿ ಕಾಣಿಸಿಕೊಂಡಿದ್ದರು. 2008ರಲ್ಲಿ ಪ್ರಸಾರವಾದ ಮತ್ತೂಂದು ಧಾರಾವಾಹಿಯಲ್ಲಿ ನಿಜ ಜೀವನದಲ್ಲೂ ದಂಪತಿಗಳಾಗಿರುವ ಗುರ್ಮಿತ್ ಚೌಧರಿ ಮತ್ತು ದೇಬೀನಾ ಬ್ಯಾನರ್ಜಿ ಜೋಡಿ ರಾಮ, ಸೀತೆಯಾಗಿ ಕಾಣಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Actor Darshan: 6 ತಿಂಗಳ ಬಳಿಕ ದರ್ಶನ್ ಭೇಟಿ: ಪವಿತ್ರಾ ಭಾವುಕ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.