ಬಿಜೆಪಿ ಹಲವು ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ: ರಣದೀಪ್ ಸುರ್ಜೆವಾಲಾ
Team Udayavani, Feb 5, 2022, 4:44 PM IST
ಪಣಜಿ: ಗೋವಾದಲ್ಲಿ ಚುನಾವಣೆಗೆ ಸ್ಫರ್ಧಿಸುವ ಪ್ರತಿಯೊಂದು ಪಕ್ಷವು ಕಾಂಗ್ರೇಸ್ ಅಭ್ಯರ್ಥಿಗಳನ್ನು ಬೆಂಬಲಿಸಬೇಕು. ಗೋವಾದಲ್ಲಿ ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್ ಪಕ್ಷ ರಾಜ್ಯದ ಅಭಿವೃದ್ಧಿಗೆ ಶೃಮಿಸುತ್ತಿದೆ. ಪ್ರಸಕ್ತ ಬಾರಿ ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗುವುದು ಖಚಿತ ಎಂದು ಕಾಂಗ್ರೇಸ್ ರಾಷ್ಟ್ರೀಯ ನಾಯಕ ರಣದೀಪ್ ಸುರ್ಜೆವಾಲಾ ಹೇಳಿದ್ದಾರೆ.
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋವಾ ಸೇರಿದಂತೆ ದೇಶಾದ್ಯಂತ 60 ಲಕ್ಷ ಸರ್ಕಾರಿ ನೌಕರಿ ಹುದ್ದೆಗಳು ಖಾಲಿಯಿದೆ. ಈ ಹುದ್ದೆಗಳನ್ನು ಭರ್ತಿ ಮಾಡದೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿದ್ಯಾವಂತ ಯುವಕರಿಗೆ ದ್ರೋಹ ಬಗೆದಿದೆ. ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷ ಸೇರಲು ಉತ್ಸುಕರಾಗಿದ್ದಾರೆ. ಆದರೆ ಅಂತಹ ಪಕ್ಷಾಂತರಿ ನಾಯಕರಿಗೆ ಉಮೇದುವಾರಿಕೆಗೆ ಅವಕಾಶ ನೀಡುವ ಬದಲು ಯುವ ಮುಖಗಳಿಗೆ,ಮಹಿಳೆಯರಿಗೆ ಅವಕಾಶ ನೀಡುತ್ತಿದ್ದೇವೆ ಎಂದು ಬಿಜೆಪಿ ರಾಷ್ಟ್ರೀಯ ನಾಯಕ ಸುರ್ಜೆವಾ ಲಾಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರವರು ಚುನಾವಣಾ ಪ್ರವಾಸಿಗರು. ಹೊರಗಿನಿಂದ ಬಂದ ಪಕ್ಷಗಳು ಗೋವಾವನ್ನು ಅಭಿವೃದ್ಧಿ ಪಡಿಸಲು ಸಾಧ್ಯವಿಲ್ಲ. ಗೋವಾ ಅಭಿವೃದ್ಧಿಗೆ ಪ್ರವಾಸೋದ್ಯಮ ವ್ಯವಹಾರದತ್ತ ಗಮನಹರಿಸಬೇಕು. ಕಾಂಗ್ರೆಸ್ ಪಕ್ಷವು ಜನರಿಗಾಗಿ ಕೆಲಸ ಮಾಡುತ್ತಿದೆ, ಮತ್ತು ಗೋವಾದಲ್ಲಿ ಸ್ಥಿರ ಸರ್ಕಾರ ನೀಡಲಿದೆ ಎಂದು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಣದೀಪ್ ಸುರ್ಜೆವಾಲಾ ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಗೋವಾ ಪ್ರಭಾರಿ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.