ಅತ್ಯಾಚಾರ ಆರೋಪಿಗಳ ನಿವಾಸ ಧ್ವಂಸ
-12ರ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮಧ್ಯಪ್ರದೇಶದ ಸತ್ನಾದಲ್ಲಿ ಕಠಿಣ ಕ್ರಮ
Team Udayavani, Jul 30, 2023, 7:20 AM IST
ಭೋಪಾಲ್: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಮೈಹಾರ್ನಲ್ಲಿ 12 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ವಿಕೃತಿ ಮೆರೆದಿದ್ದ ಇಬ್ಬರು ಆರೋಪಿಗಳ ವಿರುದ್ಧ ಸ್ಥಳೀಯಾಡಳಿತ ಕ್ರಮ ಕೈಗೊಂಡಿದ್ದು, ಇಬ್ಬರೂ ಆರೋಪಿಗಳ ನಿವಾಸವನ್ನು ಶನಿವಾರ ಧ್ವಂಸಗೊಳಿಸಿದೆ. ಅತ್ಯಾಚಾರದ ಘಟನೆ ಬಹಿರಂಗಗೊಳ್ಳುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಗಳ ವಿರುದ್ಧದ ಕಠಿಣ ಕ್ರಮಕ್ಕೆ ಆದೇಶಿಸಿದ್ದರು.
ಈ ಹಿನ್ನೆಯಲ್ಲಿ ಮೈಹರ್ ಪುರಸಭೆಯ ಅಧಿಕಾರಿಗಳು ಆರೋಪಿಗಳಾದ ರವೀಂದ್ರ ಕುಮಾರ್ ಹಾಗೂ ಅತುಲ್ ಭದೋಲಿಯಾ ಅವರ ಜಮೀನು ಮತ್ತು ಮನೆಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿದ್ದರು. ಇಬ್ಬರೂ ಆರೋಪಿಗಳ ನಿವಾಸವನ್ನು ಸರ್ಕಾರಿ ಭೂಮಿಯಲ್ಲಿ ಅನುಮತಿ ಇಲ್ಲದೇ, ನಿರ್ಮಿಸಿರುವುದು ತಿಳಿದುಬಂದ ಬೆನ್ನಲ್ಲೇ ಶನಿವಾರ ಬೆಳಗ್ಗೆ ಆರೋಪಿಗಳ ನಿವಾಸಗಳನ್ನು ಧ್ವಂಸಗೊಳಿಸಿರುವುದಾಗಿ ತಿಳಿಸಿದ್ದಾರೆ. ಇನ್ನು ಪ್ರಸಿದ್ಧ ಸರಸ್ವತಿ ದೇಗುಲದ ಟ್ರಸ್ಟ್ನಲ್ಲಿ ಆರೋಪಿಗಳು ಕಾರ್ಯ ನಿರ್ವಹಿಸುತ್ತಿದ್ದು, ಆ ಇಬ್ಬರನ್ನೂ ದೇಗುಲ ಮಂಡಳಿ ಕೆಲಸದಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ.
ಏನಿದು ಪ್ರಕರಣ?
ಮೈಹಾರ್ ಪ್ರದೇಶದ 12 ವರ್ಷದ ಬಾಲಕಿಯೊಬ್ಬಳು ಗುರುವಾರದಿಂದ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಅಲ್ಲಿನ ಪ್ರಸಿದ್ಧ ದೇಗುಲ ಸಮೀಪದ ಕಾಡು ಪ್ರದೇಶದಲ್ಲಿ ಆಕೆ ರಕ್ತದ ಮಡುವಲ್ಲಿ ಬಿದ್ದಿರುವುದು ಪತ್ತೆಯಾಗಿತ್ತು. ಆಕೆಯ ಮೇಲೆ ರವೀಂದ್ರ ಹಾಗೂ ಅತುಲ್ ಎಂಬಿಬ್ಬರು ಸೇರಿ ಅತ್ಯಾಚಾರವೆಸಗಿದ್ದಾರೆ ಎಂಬ ಆರೋಪವಿದೆ. ಅಲ್ಲದೇ, ಬಾಲಕಿಯನ್ನು ತೀವ್ರವಾಗಿ ಹಿಂಸಿಸಿ, ಆಕೆಯ ದೇಹವನ್ನು ಕಚ್ಚಿ ಗಾಯಗೊಳಿಸಿ, ಗುಪ್ತಾಂಗಕ್ಕೆ ಹರಿತವಾದ ವಸ್ತುವೊಂದನ್ನು ಚುಚ್ಚಿದ್ದಾರೆ ಎನ್ನಲಾಗಿದ್ದು, ವೈದ್ಯಕೀಯ ವರದಿಗಳ ಬಳಿಕವಷ್ಟೇ ಇದು ದೃಢಪಡಬೇಕಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರವೇ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಸಂತ್ರಸ್ತೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.