Ratan Tata; ಪಾರ್ಸಿ ಸಂಪ್ರದಾಯದಂತೆ ರತನ್ ಟಾಟಾ ಅಂತ್ಯಕ್ರಿಯೆ: ಸರ್ವ ಧರ್ಮ ಪ್ರಾರ್ಥನೆ
ಸಕಲ ಸರಕಾರಿ ಗೌರವ..ಸಾವಿರಾರು ಜನರಿಂದ ಅಂತಿಮ ನಮನ.. ಮಹಾರಾಷ್ಟ್ರದಲ್ಲಿ ಒಂದು ದಿನ ಶೋಕಾಚರಣೆ...
Team Udayavani, Oct 10, 2024, 8:33 PM IST
ಮುಂಬಯಿ: ಬುಧವಾರ ನಿಧನ ಹೊಂದಿದ ಉದ್ಯಮ ರಂಗದ ದಿಗ್ಗಜ ರತನ್ ಟಾಟಾ ಅವರ ಅಂತ್ಯಕ್ರಿಯೆ ಗುರುವಾರ(ಅ10) ಸಕಲ ಸರಕಾರಿ ಗೌರವದೊಂದಿಗೆ ಪಾರ್ಸಿ ಸಮುದಾಯದವರು ಅನುಸರಿಸುವ ವಿಧಿವಿಧಾನಗಳ ಪ್ರಕಾರ ನಡೆಯಿತು. ಬಳಿಕ ಅವರನ್ನು ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.
ಟಾಟಾ ಅವರ ಪಾರ್ಥಿವ ಶರೀರವನ್ನು ದಕ್ಷಿಣ ಮುಂಬೈನ ನಾರಿಮನ್ ಪಾಯಿಂಟ್‌ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್‌ನಲ್ಲಿ (ಎನ್‌ಸಿಪಿಎ) ಗುರುವಾರ ಬೆಳಗ್ಗೆ 10.30 ರಿಂದ ಸಂಜೆ 4 ರವರೆಗೆ ಸಾರ್ವಜನಿಕರಿಗೆ ಗೌರವ ಸಲ್ಲಿಸಲು ಇಡಲಾಗಿತ್ತು.ಗಣ್ಯಾತೀಗಣ್ಯರು ಸೇರಿ ಸಾವಿರಾರು ಜನರು ಅಂತಿಮ ನಮನ ಸಲ್ಲಿಸಿದರು. ನಂತರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ವರ್ಲಿ ಚಿತಾಗಾರಕ್ಕೆ ಕೊಂಡೊಯ್ಯಲಾಯಿತು.
ಟಾಟಾ ಅವರನ್ನು “ನೈತಿಕತೆ ಮತ್ತು ಉದ್ಯಮಶೀಲತೆಯ ವಿಶಿಷ್ಟ ಮಿಶ್ರಣ” ಎಂದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಕೈಗಾರಿಕೋದ್ಯಮಿಗೆ ಗೌರವ ಸಲ್ಲಿಸಲು ಗುರುವಾರ ರಾಜ್ಯದಲ್ಲಿ ಒಂದು ದಿನದ ಶೋಕಾಚರಣೆಯನ್ನು ಘೋಷಿಸಿದ್ದಾರೆ.
ಕೇಂದ್ರ ಸರಕಾರದ ಪರವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಇತರ ಸಚಿವರು ಮತ್ತು ಅಂಬಾನಿ ಅವರಂತಹ ಉನ್ನತ ಉದ್ಯಮಿಗಳು ಆಗಮಿಸಿ ಅಂತಿಮ ನಮನ ಸಲ್ಲಿಸಿದರು.
ಸರ್ವ ಧರ್ಮ ಪ್ರಾರ್ಥನೆ
ಅಂತಿಮ ನಮನದ ವೇಳೆ ಪಾರ್ಸಿ ಮಾತ್ರವಲ್ಲದೆ, ಮುಸ್ಲಿಂ, ಹಿಂದೂ, ಕ್ರಿಶ್ಚಿಯನ್ ಸೇರಿ ಸರ್ವ ಧರ್ಮ ಪ್ರಾರ್ಥನೆ ನಡೆಸಲಾಯಿತು.
ಶೋಕಾಚರಣೆಯ ಸಂಕೇತವಾಗಿ ಮಹಾರಾಷ್ಟ್ರದ ಸರಕಾರಿ ಕಚೇರಿಗಳ ಮೇಲೆ ತ್ರಿವರ್ಣ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಹಾಗೆಯೇ ರಾಜ್ಯದಲ್ಲಿ ಮನರಂಜನಾ ಕಾರ್ಯಕ್ರಮಗಳೂ ಇರುವುದಿಲ್ಲ.
#WATCH | Mumbai, Maharashtra: Mortal remains of veteran industrialist Ratan Tata brought to Worli crematorium for his last rites, which will be carried out with full state honour. pic.twitter.com/8lB2F2AmFH
— ANI (@ANI) October 10, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.