ಆರ್ ಬಿಐ ಕ್ರಮ ಸಣ್ಣ ಉದ್ಯಮಿಗಳು, ರೈತರಿಗೆ ತುಂಬಾ ಅನುಕೂಲವಾಗಲಿದೆ: ಪ್ರಧಾನಿ ಮೋದಿ
ದೇಶಾದ್ಯಂತ ಘೋಷಿಸಿರುವ ಲಾಕ್ ಡೌನ್ ನಿಂದಾಗಿ ಆರ್ಥಿಕ ಪುನಶ್ಚೇತನಕ್ಕಾಗಿ ಆರ್ ಬಿಐ ಹಲವಾರು ಕ್ರಮ ಕೈಗೊಳ್ಳುತ್ತಿದೆ
Team Udayavani, Apr 17, 2020, 5:24 PM IST
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ರಿವರ್ಸ್ ರೆಪೋ ದರವನ್ನು ಇಳಿಕೆ ಮಾಡುವ ಮೂಲಕ ಹಣಕಾಸಿನ ಸಾಮರ್ಥ್ಯವನ್ನು ಹೆಚ್ಚಿಸಿದ್ದಲ್ಲದೇ, ಸಾಲ ನೀಡುವಿಕೆಯ ಹಾದಿಯನ್ನು ಮತ್ತಷ್ಟು ಸುಧಾರಣಾ ಹಾದಿಗೆ ತಂದಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಆರ್ ಬಿಐ ಕೈಗೊಂಡ ನಿರ್ಧಾರದಿಂದಾಗಿ ನಮ್ಮ ಸಣ್ಣ ಉದ್ಯಮಗಳಿಗೆ, ರೈತರಿಗೆ ಹಾಗೂ ಬಡವರಿಗೆ ತುಂಬಾ ಸಹಾಯ ಮಾಡಲಿದೆ. ಇದರಿಂದ ಎಲ್ಲಾ ರಾಜ್ಯಗಳಿಗೂ ಡಬ್ಲ್ಯುಎಂಎ(ways and means advances-ಇದು ಆರ್ ಬಿಐ ಅಡಿ ರಾಜ್ಯ ಸರ್ಕಾರಗಳಿಗೆ ಸಾಲ ನೀಡುವ ನೀತಿ) ಮಿತಿಯನ್ನು ಹೆಚ್ಚಿಸಲು ನೆರವಾಗಲಿದೆ ಎಂದು ಪ್ರಧಾನಿ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಶುಕ್ರವಾರ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಸುದ್ದಿಗೋಷ್ಠಿಯಲ್ಲಿ, ರಿವರ್ಸ್ ರೆಪೋ ದರವನ್ನು ಶೇ.25 ಬೇಸಿಸ್ ಪಾಯಿಂಟ್ ಗಳಷ್ಟು ಇಳಿಕೆ ಮಾಡಿರುವುದಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಘೋಷಿಸಿರುವ ಲಾಕ್ ಡೌನ್ ನಿಂದಾಗಿ ಆರ್ಥಿಕ ಪುನಶ್ಚೇತನಕ್ಕಾಗಿ ಆರ್ ಬಿಐ ಹಲವಾರು ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದೆ. ಸಣ್ಣ ಕೈಗಾರಿಕೆಗಳಿಗೆ ಅನುಕೂಲವಾಗುವ ದಿಸೆಯಲ್ಲಿ 50ಸಾವಿರ ಕೋಟಿ ಆರ್ಥಿಕ ಬೆಂಬಲ ನೀಡುತ್ತಿರುವುದಾಗಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.