ವಿಸ್ಪರರ್ಸ್‌ನ ಬೊಮ್ಮನ್‌, ಬೆಲ್ಲಿಗೆ ಸನ್ಮಾನ

ತ.ನಾ. ಮುಖ್ಯಮಂತ್ರಿಯಿಂದ ತಲಾ 1 ಲಕ್ಷ ರೂ. ಚೆಕ್‌

Team Udayavani, Mar 16, 2023, 7:35 AM IST

ವಿಸ್ಪರರ್ಸ್‌ನ ಬೊಮ್ಮನ್‌, ಬೆಲ್ಲಿಗೆ ಸನ್ಮಾನ

ಚೆನ್ನೈ:ತಮಿಳುನಾಡಿನ ಮುದುಮಲೈ ಅರಣ್ಯದಲ್ಲಿ ಚಿತ್ರೀಕರಿಸಲಾಗಿದ್ದ ಕಿರುಸಾಕ್ಷ್ಯಚಿತ್ರ ದಿ ಎಲಿಫೆಂಟ್‌ ವಿಸ್ಪರರ್ಸ್‌ಗೆ ಆಸ್ಕರ್‌ ಪ್ರಶಸ್ತಿ ಸಿಕ್ಕಿರುವುದು ಈಗ ಹಳೆಯ ಸುದ್ದಿ.

ಎಲಿಫೆಂಟ್‌ ವಿಸ್ಪರರ್ಸ್‌ನ ನೈಜ ಹೀರೋಗಳಾದ ಬೊಮ್ಮನ್‌ ಮತ್ತು ಬೆಲ್ಲಿ ದಂಪತಿಯನ್ನು ಸ್ವತಃ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ತಮ್ಮ ಕಾರ್ಯಾಲಯಕ್ಕೆ ಆಹ್ವಾನಿಸಿ ಸನ್ಮಾನಿಸಿದ್ದಾರೆ. ಮಾತ್ರವಲ್ಲ ತಲಾ 1 ಲಕ್ಷ ರೂ.ಗಳ ಚೆಕ್‌ ಕೂಡ ನೀಡಿದ್ದಾರೆ.

ಜತೆಗೆ, ರಾಜ್ಯದ ಆನೆ ಶಿಬಿರಗಳಲ್ಲಿ ಕೆಲಸ ಮಾಡುತ್ತಿರುವ 91 ಮಂದಿಗೂ ತಲಾ 1 ಲಕ್ಷ ರೂ.ಗಳನ್ನು ನೀಡಿದ್ದಾರೆ. ಈ ಚಿತ್ರದಿಂದ ತಮಿಳುನಾಡಿನ ಅರಣ್ಯಗಳಲ್ಲಿ ಹೇಗೆ ನೋಡಿಕೊಳ್ಳಲಾಗುತ್ತಿದೆ ಎಂದು ಗೊತ್ತಾಗಿದೆ ಎಂದು ಸ್ಟಾಲಿನ್‌ ಹೇಳಿದ್ದಾರೆ. ಕಟ್ಟುನಾಯಕನ್‌ ಬುಡಕಟ್ಟು ಜನಾಂಗಕ್ಕೆ ಸೇರಿದ ಬೊಮ್ಮನ್‌ ಮತ್ತು ಬೆಲ್ಲಿ ದಂಪತಿಗೆ ರಘು ಎಂಬ ಅನಾಥ ಮರಿಯಾನೆಯೊಂದಿಗೆ ಇರುವ ಒಡನಾಟದ ಕಥೆಯನ್ನು ಈ ಕಿರುಚಿತ್ರ ಹೇಳುತ್ತದೆ.

ನೃತ್ಯ ಮಾಡಿಲ್ಲವೇಕೆ?:
ಆಸ್ಕರ್‌ ಅಕಾಡೆಮಿ ಪ್ರಶಸ್ತಿಯ ವೇದಿಕೆಯಲ್ಲಿ ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡಿಗೆ ಜೂ.ಎನ್‌ಟಿಆರ್‌ ಮತ್ತು ರಾಮ್‌ಚರಣ್‌ ಹೆಜ್ಜೆ ಹಾಕಲಿಲ್ಲವೇಕೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡಿತ್ತು. ಅದಕ್ಕೆ ಈಗ ಉತ್ತರ ಸಿಕ್ಕಿದೆ. ಹಾಡಿಗೆ ಡಾನ್ಸ್‌ ಮಾಡುವಂತೆ ಮೊದಲಿಗೆ ಇಬ್ಬರು ನಟರನ್ನೂ ಕೇಳಿಕೊಳ್ಳಲಾಗಿತ್ತು. ಆದರೆ, ನೃತ್ಯದ ರಿಹರ್ಸಲ್‌ಗೆ ಸಮಯದ ಅಭಾವವಿದ್ದ ಕಾರಣ ಜೂ.ಎನ್‌ಟಿಆರ್‌ ಮತ್ತು ರಾಮ್‌ಚರಣ ಹಿಂದೇಟು ಹಾಕಿದ್ದರು ಎಂದು ಪ್ರೊಡ್ನೂಸರ್‌ ರಾಜ್‌ಕಪೂರ್‌ ಹೇಳಿದ್ದಾರೆ.

ನಾಟು -ನಾಟು ಹುಡುಕಾಟ ಶೇ.1105 ಹೆಚ್ಚಳ
ಆರ್‌ಆರ್‌ಆರ್‌ ಸಿನಿಮಾದ ನಾಟು-ನಾಟು ಹಾಡಿನ ಮುಡಿಗೆ ಆಸ್ಕರ್‌ ಗರಿ ಏರುತ್ತಿದ್ದಂತೆ ವಿಶ್ವಾದ್ಯಂತ ಹಾಡಿನ ಹುಡುಕಾಟವೂ ಹೆಚ್ಚಾಗಿತ್ತು. ಗೂಗಲ್‌ನಲ್ಲಿ ನಾಟುಗಾಗಿ ಹುಡುಕಾಟ ನಡೆಸಿದ ಪ್ರಮಾಣ ಶೇ.1,105ರಷ್ಟು ಹೆಚ್ಚಾಗಿತ್ತು ಎಂದು ವರದಿಯೊಂದು ತಿಳಿಸಿದೆ. ಜಪಾನೀಸ್‌ ಆನ್‌ಲೈನ್‌ ಕ್ಯಾಸಿನೋ ಗೈಡ್‌ 6ತಕರಕುಜಿ ಗೂಗಲ್‌ ಟ್ರೆಂಡ್‌ ಡೇಟಾವನ್ನು ಕಲೆಹಾಕಿದೆ. ಅದರಂತೆ, ಆಸ್ಕರ್‌ ಪ್ರಶಸ್ತಿ ಘೋಷಣೆಯಾದ ಕೆಲವೇ ಗಂಟೆಗಳಲ್ಲಿ ಜಗತ್ತಿನಾದ್ಯಂತ ಗೂಗಲ್‌ನಲ್ಲಿ ಜನರು ಈ ಹಾಡಿಗಾಗಿ ಹುಟುಕಾಟ ನಡೆಸಿದ್ದಾರೆ. ಇದು ಸಾಮಾನ್ಯ ಹುಡುಕಾಟ ಪ್ರಮಾಣಕ್ಕಿಂತ 10 ಪಟ್ಟು ಹೆಚ್ಚು ಎನ್ನಲಾಗಿದೆ. ಈ ಹಾಡು ಟಿಕ್‌ಟಾಕ್‌ನಲ್ಲೂ ಭಾರೀ ಸದ್ದುಮಾಡಿದ್ದು, 52.6 ದಶಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ಟಾಪ್ ನ್ಯೂಸ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.