ಕೇರಳದಲ್ಲಿ ಮತ್ತೆ ಭಾರೀ ಮಳೆ ಎಚ್ಚರಿಕೆ;NDRF ನೆರವು ಕೇಳಿದ ಪಿಣರಾಯಿ
Team Udayavani, Oct 4, 2018, 10:46 AM IST
ತಿರುವನಂತಪುರ:ಇತ್ತೀಚೆಗಷ್ಟೇ ಶತಮಾನದ ಮಹಾ ಮಳೆಗೆ ತತ್ತರಿಸಿ, ಈಗ ತಾನೇ ಚೇತರಿಸಿಕೊಳ್ಳುತ್ತಿರುವ ಕೇರಳಕ್ಕೆ ಮತ್ತೆ ಮಹಾ ಮಳೆಯ ಭೀತಿ ಎದುರಾಗಿದೆ.
ಶ್ರೀಲಂಕಾಕ್ಕೆ ಸನಿಹದ ಪ್ರಾಂತ್ಯವೊಂದರಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ದೈತ್ಯ ಚಂಡ ಮಾರುತದ ಅಲೆಗಳು ಸೃಷ್ಟಿಯಾಗಿದ್ದು ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅ. 7ರಂದು ಇಡುಕ್ಕಿ, ತ್ರಿಶೂರ್ ಹಾಗೂ ಪಾಲ್ಕಕಾಡ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಎಲ್ಲಾ ತುರ್ತು ನೆರವಿಗೆ ಸಿದ್ಧತೆಗಳನ್ನು ನಡೆಸಲು ಸೂಚನೆ ನೀಡಿದ್ದಾರೆ ಮಾತ್ರವಲ್ಲದೆ ಕೇಂದ್ರ ಸರ್ಕಾರದ ನೆರವನ್ನೂ ಕೇಳಿದ್ದಾರೆ.
ಈಗಾಗಲೆ ಎನ್‌ಡಿಆರ್‌ಎಫ್ನ 5 ತಂಡಗಳನ್ನು ಕೇರಳಕ್ಕೆ ಕಳುಹಿಸಲಾಗಿರುವ ಬಗ್ಗೆ ವರದಿಯಾಗಿದೆ.
ಪ್ರವಾಸಿಗರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು, ಸಮುದ್ರ ತೀರ ಪ್ರದೇಶಗಳು ಮತ್ತು ಗುಡ್ಡಗಾಡು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ.
ಬುಧವಾರ ಸಂಜೆಯಿಂದ ತ್ರಿಶೂರ್‌ನಲ್ಲಿ ಭಾರೀ ಗಾಳಿಯೊಂದಿಗೆ ಮಳೆ ಆರಂಭವಾಗಿದ್ದು, ಜನ ಜೀವನ ಅಸ್ತವ್ಯಸ್ತ ವಾಗಿದೆ.
ಕಳೆದ ತಿಂಗಳಿನಲ್ಲಿ ಸುರಿದ ಮಹಾಮಳೆಗೆ ಮುಳುಗಡೆಯಾಗಿದ್ದ ಕೇರಳದಲ್ಲಿ 231 ಮಂದಿ ಪ್ರಾಣ ಕಳೆದುಕೊಂಡಿದ್ದರು,ಸಾವಿರಾರು ಮಂದಿ ಮನೆಗಳನ್ನು ಕಳೆದುಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.