ರಫೇಲ್ ಡೀಲ್ ಸುಪ್ರೀಂ ತೀರ್ಪಿಗೆ ರಿಲಯನ್ಸ್ ಅನಿಲ್ ಅಂಬಾನಿ ಸ್ವಾಗತ
Team Udayavani, Dec 14, 2018, 12:25 PM IST
ಹೊಸದಿಲ್ಲಿ : ರಫೇಲ್ ಫೈಟರ್ ಜೆಟ್ ಡೀಲ್ ನಲ್ಲಿ ಯಾವುದೇ ಅಕ್ರಮ, ಅವ್ಯವಹಾರ ನಡೆದಿಲ್ಲ ಎಂದು ಕೇಂದ್ರ ಸರಕಾರಕ್ಕೆ ಕ್ಲೀನ್ ಚಿಟ್ ನೀಡುವ ತೀರ್ಪನ್ನು ಸುಪ್ರೀಂ ಕೋರ್ಟ್ ಇಂದು ಪ್ರಕಟಿಸಿರುವುದನ್ನು ರಿಲಯನ್ಸ್ ಡಿಫೆನ್ಸ್ ಮುಖ್ಯಸ್ಥ ಅನಿಲ್ ಅಂಬಾನಿ ಸ್ವಾಗತಿಸಿದ್ದಾರೆ.
ರಫೇಲ್ ಡೀಲ್ನಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ರಾಜಕೀಯ ಪ್ರೇರಿತ ಆರೋಪಗಳೆಲ್ಲ ಸುಳ್ಳೆಂದು ಇದೀಗ ಉನ್ನತ ಕೋರ್ಟ್ ತೀರ್ಪಿನ ಮೂಲಕ ಸಾಬೀತಾಗಿರುವುದು ಸಂತಸ, ತೃಪ್ತಿ ತಂದಿದೆ ಎಂದು ಅನಿಲ್ ಅಂಬಾನಿ ಹೇಳಿದ್ದಾರೆ.
ಅನಿಲ್ ಅಂಬಾನಿಯವರ ರಿಲಯನ್ಸ್ ಡಿಫೆನ್ಸ್ ಕಂಪೆನಿಯನ್ನು ರಫೇಲ್ ಫೈಟರ್ ಜೆಟ್ ಪೂರೈಸುವ ಫ್ರಾನ್ಸಿನ ಡಸಾಲ್ಟ್ ಕಂಪೆನಿಯು ತನ್ನ ಮಧ್ಯವರ್ತಿಯನ್ನಾಗಿ ನೇಮಿಸಿಕೊಂಡಿರುವುದು ಪ್ರಶ್ನಾರ್ಹವಾಗಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಹೇಳಿದೆಯಲ್ಲದೆ, ಈ ಡೀಲ್ ನಿರ್ಧಾರ ಪ್ರಕ್ರಿಯೆಯಲ್ಲಿ ಯಾವುದೇ ಸಂದೇಹಕ್ಕೆ ಕಾರಣಗಳಿಲ್ಲ ಎಂದು ಹೇಳಿರುವುದು ಕೇಂದ್ರ ಸರಕಾರಕ್ಕೆ ಬಿಗ್ ರಿಲೀಫ್ ಆಗಿದೆ.
ನನ್ನ ಕಂಪೆನಿಯು ದೇಶದ ಭದ್ರತೆಗೆ ಮತ್ತು ಡಸಾಲ್ಟ್ ಕಂಪೆನಿಯೊಂದಿಗಿನ ಆಫ್ಸೆಟ್ ಡೀಲ್ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ಅನಿಲ್ ಅಂಬಾನಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Man Fined: ಹೀಗೂ ಉಂಟೇ…! ಹೆಲ್ಮೆಟ್ ಧರಿಸಿಲ್ಲ ಎಂದು ಪಾದಚಾರಿಗೆ ದಂಡ ವಿಧಿಸಿದ ಪೊಲೀಸ್
BJP; ಅಮಿತ್ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್ ಸೂಚನೆ
INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು
Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.