Wayanad landslides ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ನೆರವು

Team Udayavani, Aug 7, 2024, 6:06 PM IST

18-wayanad

ವಯನಾಡ್‌: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರ ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್ ಫೌಂಡೇಷನ್ ಯೋಜನೆ ಮಾಡಿದೆ.

ಫೌಂಡೇಷನ್ ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ಆಹಾರ ಪದಾರ್ಥಗಳು, ಒಣಹಣ್ಣುಗಳು, ಹಾಲು, ಪಡಿತರ, ಅಡುಗೆ ಪಾತ್ರೆಗಳು, ಕುಡಿಯುವ ನೀರು, ಮೂಲಭೂತ ನೈರ್ಮಲ್ಯ ವಸ್ತುಗಳು, ಟೆಂಟ್‌ಗಳು, ಹಾಸಿಗೆಗಳು, ಸೋಲಾರ್ ಚಾಲಿತ ಸಾಧನಗಳು ಮತ್ತು ಟಾರ್ಚ್‌ಗಳಂತಹ ವಸ್ತುಗಳನ್ನು ಒದಗಿಸುತ್ತಿದೆ.

ಸಂತ್ರಸ್ತ ಕುಟುಂಬಗಳಿಗೆ ಬೀಜಗಳು, ಮೇವು, ಉಪಕರಣಗಳು ಮತ್ತು ವೃತ್ತಿಪರ ತರಬೇತಿಯನ್ನು ನೀಡಲಾಗುವುದು. ಇದರಿಂದಾಗಿ ಅವರ ಜೀವನ ಮತ್ತೆ ಹಳಿಗೆ ಮರಳುತ್ತದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡೆತಡೆಗಳು ಆಗದಿರುವಂತೆ ರಿಲಯನ್ಸ್ ಫೌಂಡೇಷನ್ ನಿಂದ ಪುಸ್ತಕಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒಳಗೊಂಡಂತೆ ಶಿಕ್ಷಣಕ್ಕೆ ಬೇಕಾದ ಬೆಂಬಲವನ್ನು ನೀಡುತ್ತದೆ.

ರಕ್ಷಣಾ ಕಾರ್ಯಕರ್ತರು ಮತ್ತು ವಿಪತ್ತು ನಿರ್ವಹಣಾ ತಂಡಗಳ ಸುಗಮ ಕಾರ್ಯನಿರ್ವಹಣೆಗಾಗಿ ರಿಲಯನ್ಸ್ ಜಿಯೋ ವಿಶೇಷ ಟವರ್‌ಗಳನ್ನು ಸ್ಥಾಪಿಸಿದೆ. ಇದರಿಂದ ಸಂವಹನವನ್ನು ಸುಧಾರಿಸಬಹುದು ಮತ್ತು ವಿಪತ್ತು ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಬಹುದು. ಮಾನಸಿಕ-ಸಾಮಾಜಿಕ ಆಘಾತದಿಂದ ಪೀಡಿತ ವ್ಯಕ್ತಿಗಳಿಗೆ ರಿಲಯನ್ಸ್ ಫೌಂಡೇಷನ್ ತಜ್ಞರ ಸಹಾಯವನ್ನು ಸಹ ಒದಗಿಸುತ್ತಿದೆ.

ಕೇರಳದಲ್ಲಿ ನಡೆದ ಈ ದುರಂತ ಘಟನೆಯ ಕುರಿತು ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ, ವಯನಾಡಿನ ಜನರ ನೋವು ಮತ್ತು ಭೂಕುಸಿತದಿಂದ ಉಂಟಾದ ಅಪಾರ ನಷ್ಟದಿಂದ ನಾವು ಕೂಡಾ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ ಘಟನೆಯಿಂದ ಬಾಧಿತರಾದ ಪ್ರತಿ ವ್ಯಕ್ತಿ ಮತ್ತು ಕುಟುಂಬದೊಂದಿಗೆ ನಾವಿದ್ದೇವೆ ಎಂದರು.

ಮುಂದುವರಿದು ಮಾತನಾಡಿ, ನಮ್ಮ ರಿಲಯನ್ಸ್ ಫೌಂಡೇಷನ್ ತಂಡಗಳು ಹಗಲು-ರಾತ್ರಿ ಕೆಲಸ ಮಾಡುತ್ತಿವೆ. ಈ ಕಷ್ಟದ ಸಮಯದಲ್ಲಿ ನಾವು ಕೇರಳದ ಜನರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದರು.

ಕಂಪನಿ ಹೇಳಿಕೆ ಪ್ರಕಾರ, ಪರಿಹಾರ ಸಾಮಗ್ರಿಗಳೊಂದಿಗೆ ಸಮಸ್ಯೆಯಾದ ಸ್ಥಳದಲ್ಲಿ ರಿಲಯನ್ಸ್ ಫೌಂಡೇಷನ್ ತಂಡಗಳಿವೆ. ರಾಜ್ಯದ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತದೊಂದಿಗೆ ನಿರಂತರ ಚರ್ಚೆ ನಡೆಸಲಾಗುತ್ತಿದೆ. ಪ್ರತಿಯೊಂದು ಕಾರ್ಯವನ್ನು ರಾಜ್ಯ ಸರ್ಕಾರ ಮತ್ತು ಇತರ ವಿಪತ್ತು ನಿರ್ವಹಣಾ ಸಂಸ್ಥೆಗಳ ಸಮನ್ವಯದಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಇದರಿಂದ ಸಹಾಯವು ಸಮಯಕ್ಕೆ ತಲುಪುತ್ತದೆ. ರಿಲಯನ್ಸ್ ಫೌಂಡೇಷನ್ ದೀರ್ಘಾವಧಿಯಲ್ಲಿ ವಯನಾಡಿನ ಜನರನ್ನು ಬೆಂಬಲಿಸಲು ಬದ್ಧವಾಗಿದೆ.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.