Gurugram ಧಾರ್ಮಿಕ ಕೇಂದ್ರಕ್ಕೆ ಬೆಂಕಿ ಹಚ್ಚಿ ದಾಂಧಲೆ; ಪೊಲೀಸರಿಂದ ಪಹರೆ ಮುಂದುವರಿಕೆ
ಹರಿಯಾಣದಲ್ಲಿ ಕಿಡಿಗೇಡಿಗಳಿಂದ ದುಷ್ಕೃತ್ಯ
Team Udayavani, Aug 7, 2023, 11:34 PM IST
ಗುರುಗ್ರಾಮ/ಚಂಡೀಗಢ: ಹರಿಯಾಣದ ನೂಹ್‌ನಲ್ಲಿ ನಡೆದ ಹಿಂಸಾಚಾರಗಳು ನಿಯಂತ್ರಣಕ್ಕೆ ಬರುತ್ತಲೇ ಗುರುಗ್ರಾಮ ಜಿಲ್ಲೆಯ ಗ್ರಾಮವೊಂದರಲ್ಲಿ ಧಾರ್ಮಿಕ ಕೇಂದ್ರದ ಮೇಲೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಅಲ್ಲಿ ಧಾರ್ಮಿಕ ಕಾರ್ಯಗಳಿಗೆ ಬಳಕೆ ಮಾಡಲಾಗುತ್ತಿದ್ದ ವಸ್ತುಗಳು ಸುಟ್ಟು ಹೋಗಿವೆ. ಜಿಲ್ಲೆಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಇರುವ ಸಂದರ್ಭದಲ್ಲಿಯೇ ಈ ಘಟನೆ ನಡೆದಿದೆ.
ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಜನರು ಈ ಧಾರ್ಮಿಕ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಧಾರ್ಮಿಕ ಕೇಂದ್ರಕ್ಕೆ ತಡರಾತ್ರಿ 1.30ರ ವೇಳೆಗೆ ಬೆಂಕಿ ಹಚ್ಚಲಾಯಿತು. ಸ್ಥಳೀ ಯರ ನೆರವಿನಿಂದ ಅದನ್ನು ನಿಯಂತ್ರಿ ಸಲಾಗಿದೆ ಎಂದು ಪೊಲೀಸರಿಗೆ ಸಲ್ಲಿಸಲಾ ಗಿರುವ ದೂರಿನಲ್ಲಿ ಆರೋ ಪಿಸಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.
ತೆರವಿಗೆ ತಡೆಯಾಜ್ಞೆ: ಇತ್ತೀಚೆಗಷ್ಟೇ ಹಿಂಸಾಕೃತ್ಯಗಳು ನಡೆದು ಸದ್ಯ ತಣ್ಣಗಾ ಗಿರುವ ಹರಿಯಾಣದ ನೂಹ್‌ನಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿರುವ ಅಕ್ರಮ ಕಟ್ಟಡಗಳನ್ನು ಕೆಡವಿ ಹಾಕುವ ಕೆಲಸಕ್ಕೆ ತಡೆಯಾಜ್ಞೆ ವಿಧಿಸಲಾಗಿದೆ. ಸರಕಾರದ ಈ ಕ್ರಮದ ಬಗ್ಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ನ್ಯಾ| ಜಿ.ಎಸ್.ಸಂಧಾವಲಿಯಾ ನೇತೃತ್ವದ ನ್ಯಾಯಪೀಠ ಸ್ವಯಂಪ್ರೇರಿತವಾಗಿ ವಿಚಾ ರಣೆ ನಡೆಸಿತು. ಮುಂದಿನ ಹಂತ ಗಳಲ್ಲಿ ಅಕ್ರಮ ಕಟ್ಟಡಗಳನ್ನು ತೆರವಿನ ಕಾರ್ಯಾಚರಣೆ ನಡೆಸಕೂಡದು ಎಂದು ಆದೇಶ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.