ಅಣ್ವಸ್ತ್ರ ನಿರ್ಮೂಲನೆ ಒಪ್ಪಂದದಿಂದ ದೂರ ಉಳಿದ ಭಾರತ
Team Udayavani, Jul 9, 2017, 3:45 AM IST
ವಿಶ್ವಸಂಸ್ಥೆ: ಅಣ್ವಸ್ತ್ರಗಳಿಗೆ ನಿಷೇಧ ಹೇರುವ ಪ್ರಪ್ರಥಮ ಜಾಗತಿಕ ಒಪ್ಪಂದವನ್ನು ಆಂಗೀಕರಿಸುವುದರ ಪರವಾಗಿ ಶನಿವಾರ ವಿಶ್ವಸಂಸ್ಥೆಯ ಸುಮಾರು 122 ದೇಶಗಳು ಮತ ಹಾಕಿದವು. ಆದರೆ ಭಾರತ, ಪಾಕಿಸ್ಥಾನ, ಚೀನ ಸೇರಿದಂತೆ ಪರಮಾಣು ಶಸ್ತ್ರಾಸ್ತ್ರ ಹೊಂದಿರುವ 8 ದೇಶಗಳು ಈ ಚರ್ಚೆಯಿಂದ ದೂರ ಉಳಿದು ಅಚ್ಚರಿ ಮೂಡಿಸಿದವು.
ಪರಮಾಣು ಶಸ್ತ್ರಾಸ್ತ್ರಗಳ ಮೇಲೆ ಕಾನೂನಾತ್ಮಕವಾಗಿ ತಡೆ ಹಾಕುವಂಥ ಒಪ್ಪಂದ ಇದಾಗಿದ್ದು, 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಈ ಕುರಿತು ಚರ್ಚೆ ಹಾಗೂ ನಿರ್ಣಯ ಕೈಗೊಳ್ಳಲಾಗಿದೆ. ಪರಮಾಣು ಶಸ್ತ್ರಾಸ್ತ್ರ ಗಳನ್ನು ಹೊಂದಿರುವ ಭಾರತ, ಅಮೆರಿಕ, ರಷ್ಯಾ, ಬ್ರಿಟನ್, ಚೀನ, ಫ್ರಾನ್ಸ್, ಪಾಕಿಸ್ಥಾನ, ಉತ್ತರ ಕೊರಿಯಾ ಮತ್ತು ಇಸ್ರೇಲ್ ಹೊರತಾಗಿ 122 ದೇಶಗಳು ಈ ಒಪ್ಪಂದವನ್ನು ಆಂಗೀಕರಿಸಿವೆ. ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಗುಟೆರಸ್, ಇದೊಂದು ಮಹತ್ವದ ಹೆಜ್ಜೆ ಎಂದು ಬಣ್ಣಿಸಿದ್ದಾರೆ.
ಅಣ್ವಸ್ತ್ರಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸಮಾವೇಶವೊಂದನ್ನು ನಡೆಸಲು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ 120ಕ್ಕೂ ಹೆಚ್ಚು ರಾಷ್ಟ್ರಗಳು ಒಪ್ಪಿದ್ದವು. ಅಂದಿನ ನಿರ್ಣಯಕ್ಕೂ ಭಾರತ ಒಪ್ಪಿರಲಿಲ್ಲ. ಈ ಒಪ್ಪಂದವು ತಮಗೆ ಒಪ್ಪಿಗೆಯಾಗಿಲ್ಲ. ಈ ಕುರಿತ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಭಾರತ ಹೇಳಿತ್ತು. ಉತ್ತರ ಕೊರಿಯಾದ ಅಣ್ವಸ್ತ್ರ ಯೋಜನೆ ಒಡ್ಡುತ್ತಿರುವ ಬೆದರಿಕೆಗಳಿಗೆ ಈ ಒಪ್ಪಂದವು ಯಾವುದೇ ಪರಿಹಾರ ಸೂಚಿಸುವುದಿಲ್ಲ ಎಂದು ಅಮೆರಿಕ, ಯುಕೆ ಮತ್ತು ಫ್ರಾನ್ಸ್ ಹೇಳಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್‌ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.