ಗಣರಾಜ್ಯ ದಿನ: 40 ಮಂದಿ ಬುಡಕಟ್ಟು ಅತಿಥಿಗಳು
Team Udayavani, Jan 23, 2017, 10:06 AM IST
ಹೊಸದಿಲ್ಲಿ: ಪ್ರಸಕ್ತ ಸಾಲಿನ ಗಣರಾಜ್ಯೋತ್ಸವಕ್ಕೆ ದೇಶದ ವಿವಿಧ ಭಾಗಗಳಿಂದ 40 ಮಂದಿ ಬುಡಕಟ್ಟು ಜನಾಂಗದವರನ್ನು ಅತಿಥಿಗಳನ್ನಾಗಿ ಆಹ್ವಾನಿಸಲಾಗಿದೆ. ಅವರು ಜ.26ರಂದು ನಡೆಯಲಿರುವ ಪಥಸಂಚಲನ ವೀಕ್ಷಿಸಲಿದ್ದಾರೆ. ಜ.29ರಂದು ನಡೆಯುವ ಬೀಟಿಂಗ್ ರಿಟ್ರೀಟ್ ಸಮಾರಂಭವನ್ನು ವೀಕ್ಷಿಸುವರು. ಜತೆಗೆ ದಿಲ್ಲಿಯ ಹಲವಾರು ಪ್ರೇಕ್ಷಣೀಯ ಸ್ಥಳಗಳಿಗೆ ಅವರನ್ನು ಕರೆದೊಯ್ಯಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ. ಇದರ ಜತೆಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಯವರನ್ನೂ ಭೇಟಿ ಮಾಡುವ ಅವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ.
ಪ್ರಸಕ್ತ ಸಾಲಿನ ಗಣರಾಜ್ಯೋತ್ಸವದ ಪರೇಡ್ 95 ನಿಮಿಷಗಳ ಕಾಲ ನಡೆಯಲಿದೆ. ಪಥಸಂಚಲನದಲ್ಲಿ 23 ರಾಜ್ಯಗಳ ಸ್ತಬ್ಧ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಸ್ಕಿಲ್ ಇಂಡಿಯಾ, ಬೇಟಿ ಪಢಾವೋ; ಬೇಟಿ ಬಚಾವೋ ಸೇರಿದಂತೆ ಕೇಂದ್ರ ಸರಕಾರದ ಪ್ರಮುಖ ಇಲಾಖೆಗಳ ಟ್ಯಾಬ್ಲೋಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಯುಎಇ ರಾಜಕುಮಾರ ಶೇಕ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಶೌರ್ಯ ಪ್ರಶಸ್ತಿ ಪುರಸ್ಕತ 21 ಮಂದಿ ಮಕ್ಕಳನ್ನು ತೆರೆದ ಜೀಪ್‌ನಲ್ಲಿ ಕರೆದೊಯ್ಯಲಾಗುತ್ತದೆ.
**
ಗಣರಾಜ್ಯೋತ್ಸವಕ್ಕೂ ಮುನ್ನ ದಾಳಿ: ಇಬ್ಬರು ಯೋಧರು ಹುತಾತ್ಮ
ಗುವಾಹಾಟಿ: ಗಣರಾಜ್ಯೋತ್ಸವಕ್ಕೆ ಕೆಲವೇ ದಿನಗಳು ಬಾಕಿ ಇರುವಾಗಲೇ ಉಲ್ಫಾ ಉಗ್ರರು ರವಿವಾರ ಅಸ್ಸಾಂ-ಅರುಣಾಚಲ ಪ್ರದೇಶದ ಗಡಿಯಲ್ಲಿ ಅಟ್ಟಹಾಸ ಮೆರೆದಿದ್ದಾರೆ. ತಿನ್‌ಸುಕಿಯಾ ಜಿಲ್ಲೆಯಲ್ಲಿ ತೆರಳುತ್ತಿದ್ದ ರೈಫಲ್ ವಾಹನದ ಮೇಲೆ ಹಠಾತ್ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ದಾಳಿ ನಡೆದ ಸ್ಥಳದಲ್ಲಿ ದಟ್ಟಾರಣ್ಯ ಇದ್ದು, ಇಲ್ಲಿ ಇನ್ನು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
ರಾಜಸ್ಥಾನದಲ್ಲಿ ಮತ್ತೊಂದು ಬೋರ್ ವೆಲ್ ದುರಂತ… 150 ಅಡಿ ಆಳದಲ್ಲಿ ಸಿಲುಕಿದ 3 ವರ್ಷದ ಬಾಲಕಿ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sajipamunnur : ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.