ತ್ರಿವರ್ಣಕ್ಕಾದ ಅವಮಾನದಿಂದ ದೇಶ ಆಘಾತಕ್ಕೊಳಗಾಗಿದೆ : ಪ್ರಧಾನಿ
ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರಕ್ಕೆ 'ಮನ್ ಕಿ ಬಾತ್' ನಲ್ಲಿ ವಿಷಾದ ವ್ಯಕ್ತ ಪಡಿಸಿದ ಮೋದಿ
Team Udayavani, Jan 31, 2021, 12:51 PM IST
ನವ ದೆಹಲಿ: ಗಣರಾಜ್ಯೋತ್ಸವದಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ರೈತರ ಟ್ರ್ಯಾಕ್ಟರ್ ಪರೇಡ್, ಹಿಂಸಾಚಾರಕ್ಕೆ ತಿರುಗಿರುವುದರ ಕುರಿತು ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ ವಿಷಾದ ವ್ಯಕ್ತ ಪಡಿಸಿದ್ದಾರೆ.
ಜನವರಿ 26 ರಂದು ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜಕ್ಕೆ ಅವಮಾನಕ್ಕೆ ಸಾಕ್ಷಿಯಾದ ರಾಷ್ಟ್ರವು ಆಘಾತಕ್ಕೊಳಗಾಗಿದೆ ಎಂದು ಅವರು ಹೇಳಿದ್ದಾರೆ.
ಓದಿ : ವಿಪಕ್ಷದವರು ಏನೇ ಟೀಕೆ ಮಾಡಿದರೂ ನಾವು ಸ್ವಾಗತಿಸುತ್ತೇವೆ: ಬಿ.ಎಸ್.ಯಡಿಯೂರಪ್ಪ
ಜನವರಿಯಲ್ಲಿ ರಾಷ್ಟ್ರವು ಹಲವಾರು ಉತ್ಸವಗಳನ್ನು ಆಚರಿಸಿದೆ. ಆಸ್ಟ್ರೇಲಿಯಾದ ಕ್ರಿಕೇಟ್ ಪಿಚ್ ನಲ್ಲಿ ‘ಮೆನ್ ಇನ್ ಬ್ಲೂ’ ಅದ್ಭುತ ಗೆಲುವು ಸಾಧಿಸುವುದರ ಮೂಲಕ ಇತಿಹಾಸ ಬರೆಯಿತು. ಆದರೆ ಜನವರಿ 26 ರಂದು ತ್ರಿವರ್ಣಕ್ಕೆ ತಂದ ಅವಮಾನದಿಂದ ಬೇಸರವಾಯಿತು ಎಂದು ಪ್ರಧಾನಿ ಹೇಳಿದರು.
ಓದಿ : ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾದ ವಿ.ಕೆ. ಶಶಿಕಲಾ : ಬಿಗುಭದ್ರತೆ
ಕೆಲವು ದಿನಗಳ ಹಿಂದೆ ನಾವು ಲೋಹರಿಯನ್ನು ಆಚರಿಸಿದ್ದೇವೆ, ಮಕರ ಸಂಕ್ರಾಂತಿ, ಪೊಂಗಲ್, ಬಿಹು ಆಚರಿಸಿದೆವು. ಈ ತಿಂಗಳಲ್ಲಿ ದೇಶದ ವಿವಿಧ ಭಾಗಗಳಲ್ಲಿ ಹಬ್ಬಗಳನ್ನು ಆಚರಿಸಲಾಯಿತು …. ಕ್ರಿಕೆಟ್ ಪಿಚ್ ನಿಂದ ನಮಗೆ ಶುಭ ಸುದ್ದಿ ಸಿಕ್ಕಿತು. ಭಾರತೀಯ ಕ್ರಿಕೇಟ್ ತಂಡವು ವೈಭವಯುತವಾಗಿ ಪುಟಿದೇಳುವ ಮೂಲಕ ಆಸ್ಟ್ರೇಲಿಯಾದಲ್ಲಿ ಸರಣಿಯನ್ನು ಗೆದ್ದಿತು. ನಮ್ಮ ತಂಡದ ಕಠಿಣ ಪರಿಶ್ರಮ ನಿಜಕ್ಕೂ ಸ್ಪೂರ್ತಿದಾಯಕವಾಗಿದೆ.
ಈ ಎಲ್ಲದರ ಮಧ್ಯೆ, ಜನವರಿ 26 ರಂದು ನಡೆದ ತ್ರಿವರ್ಣದ ಅವಮಾನಕ್ಕೆ ಸಾಕ್ಷಿಯಾದ ದೇಶ ಆಘಾತಕ್ಕೊಳಗಾಯಿತು, “ಮುಂಬರುವ ದಿನಗಳನ್ನು ನಾವು ಭರವಸೆ ಮತ್ತು ನವೀನತೆಯಿಂದ ತುಂಬಬೇಕಾಗಿದೆ” ಎಂದು ಅವರು ಹೇಳಿದ್ದಾರೆ.
ಓದಿ : ಕೆಲವು ಅವಧಿಯ ನಂತರ ಸ್ಟ್ರೀಮಿಂಗ್ ಮಾಡುವುದನ್ನು ನಿಲ್ಲಿಸಲಿದೆ ನೆಟ್ ಪ್ಲಿಕ್ಸ್ ..!?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.