ಕೇಂದ್ರೀಯ ವಿವಿಗಳಲ್ಲಿ ಮೀಸಲಾತಿಗೆ ಅಸ್ತು
Team Udayavani, Apr 16, 2019, 6:00 AM IST
ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರ್ಕಾರ ಘೋಷಿಸಿದಂತೆ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೂ ಶೇ. 10 ಮೀಸಲಾತಿ ನೀಡುವ ನಿರ್ಧಾರವನ್ನು ಕೇಂದ್ರೀಯ ಶೈಕ್ಷಣಿಕ ಸಂಸ್ಥೆಗಳಿಗೂ ವಿಸ್ತರಿಸಲು ಸಚಿವ ಸಂಪುಟ ನಿರ್ಧರಿಸಿದೆ. ಇದಕ್ಕಾಗಿ 158 ಕೇಂದ್ರೀಯ ಶೈಕ್ಷಣಿಕ ಸಂಸ್ಥೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಹೆಚ್ಚುವರಿ ಸೀಟುಗಳನ್ನು ಸೃಷ್ಟಿಸಲಾಗುತ್ತದೆ. ಮೂಲಗಳ ಪ್ರಕಾರ ಈ ನಿರ್ಧಾರಕ್ಕೂ ಮುನ್ನ ಚುನಾವಣಾ ಆಯೋಗದ ಅನುಮತಿಯನ್ನು ಕೇಂದ್ರ ಸರ್ಕಾರ ಕೇಳಿತ್ತು ಎನ್ನಲಾಗಿದೆ.
2019-20 ರ ಶೈಕ್ಷಣಿಕ ವರ್ಷದಲ್ಲಿ 1.19 ಲಕ್ಷ ಹಾಗೂ 2020-21 ರ ವರ್ಷದಲ್ಲಿ 95 ಸಾವಿರ ಸೀಟ್‌ಗಳನ್ನು ಸೃಷ್ಟಿಸಲಾಗುತ್ತದೆ. ಇದಕ್ಕಾಗಿ 4315 ಕೋಟಿ ರೂ. ಮೀಸಲಿಡಲಾಗಿದೆ. ಜನವರಿ 9 ರಂದು ರಾಜ್ಯಸಭೆಯಲ್ಲಿ ಈ ಮಸೂದೆಗೆ ಸಮ್ಮತಿ ಲಭ್ಯವಾಗಿತ್ತು. ಈಗಾಗಲೇ ಇರುವ ಶೇ. 50 ಒಟ್ಟು ಮೀಸಲಾತಿಯ ಹೊರತಾಗಿ ಶೇ. 10ರ ಮೀಸಲಾತಿ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಲಭ್ಯವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.