ಅಮರಿಂದರ್ ಸಂಪುಟಕ್ಕೆ ಸಿಧು ರಾಜೀನಾಮೆ
Team Udayavani, Jul 15, 2019, 5:05 AM IST
ಚಂಡಿಗಢ: ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಜತೆಗೆ ಮುನಿಸಿಕೊಂಡಿರುವ ಸಚಿವ ನವ್ಜೋತ್ ಸಿಂಗ್ ಸಿಧು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಜು. 10 ದಿನಾಂಕ ಇರುವ ರಾಜೀನಾಮೆ ಪತ್ರವನ್ನು ಸಿಧು ರವಿವಾರ ಟ್ವೀಟ್ ಮಾಡಿದ್ದಾರೆ. ಕೈ ಬರಹದಲ್ಲಿ ಇರುವ ಈ ತ್ಯಾಗಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಸಲ್ಲಿಸಲಾಗಿದೆ. ಕಳೆದ ತಿಂಗಳ 10ರಂದೇ ಸಿಧು ಹೊಂದಿದ್ದ ಸ್ಥಳೀಯಾಡಳಿತ, ಪ್ರವಾಸೋದ್ಯಮ, ಸಾಂಸ್ಕೃತಿಕ ವ್ಯವಹಾರ ಗಳು ಮತ್ತು ವಸ್ತುಸಂಗ್ರಹಾಲಯ ಖಾತೆಯ ಬದಲಿಗೆ ಅವರಿಗೆ ಇಂಧನ ಖಾತೆ ನೀಡಲಾಗಿತ್ತು.
ಇದರಿಂದ ಅಸಮಾಧಾನಗೊಂಡಿದ್ದ ಸಿಧು “ಪಂಜಾಬ್ ಸಂಪುಟದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ಒಂದು ಸಾಲಿನಲ್ಲಿ ಬರೆದಿದ್ದಾರೆ. ಆರಂಭದ ಟ್ವೀಟ್ನಲ್ಲಿ ಸಿಧು ನೇರವಾಗಿಯೇ ರಾಹುಲ್ಗೆ ರಾಜೀನಾಮೆ ರವಾನಿಸಿದ್ದಾಗಿ ಹೇಳಿಕೊಂಡಿದ್ದರು. ಅಮೃತಸರ ಪೂರ್ವ ಕ್ಷೇತ್ರದ ಶಾಸಕರೂ ಆಗಿರುವ ಅವರು ಮತ್ತೂಂದು ಟ್ವೀಟ್ ಮಾಡಿ ರಾಜೀನಾಮೆ ಯನ್ನು ಮುಖ್ಯಮಂತ್ರಿಗೂ ಕಳುಹಿಸುವುದಾಗಿ ಬರೆದಿದ್ದಾರೆ. ರಾಹುಲ್ಗೆ ತ್ಯಾಗಪತ್ರ ಕಳುಹಿಸಿ ಕೊಟ್ಟ ಅವರ ಕ್ರಮ ಟ್ವಿಟರ್ನಲ್ಲಿ ಸಾಕಷ್ಟು ಟ್ರೋಲ್ಗೂ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.