ಮಾರ್ಚ್‌ಗೆ ಹಣದುಬ್ಬರ ಶೇ.5ಕ್ಕಿಂತ ಕೆಳಗೆ; ಎಸ್‌ಬಿಐ ಸಂಶೋಧನಾ ವರದಿ ಉಲ್ಲೇಖ
ಮುಂದಿನ ಆರ್‌ಬಿಐ ಸಭೆಯಲ್ಲಿ ಬಡ್ಡಿ ದರ ಏರಿಕೆ ಖಚಿತ
Team Udayavani, Jan 15, 2023, 7:30 AM IST
ನವದೆಹಲಿ/ಮುಂಬೈ:ಗ್ರಾಹಕ ಮಾರುಕಟ್ಟೆ ಆಧಾರಿತ ಹಣದುಬ್ಬರ ಪ್ರಮಾಣ ಮಾರ್ಚ್‌ಗೆ ಶೇ.5ಕ್ಕಿಂತಲೂ ಇಳಿಕೆಯಾಗುವ ಸಾಧ್ಯತೆ ಇದೆ. ಹೀಗೆಂದು ಭಾರತೀಯ ಸ್ಟೇಟ್ ಬ್ಯಾಂಕ್‌ನ ಸಂಶೋಧನಾ ವಿಭಾಗದ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.
ಕೇಂದ್ರ ಸರ್ಕಾರದ ಡಿಸೆಂಬರ್‌ನಲ್ಲಿ ಹಣದುಬ್ಬರ ಪ್ರಮಾಣ ಒಂದು ವರ್ಷದ ಕನಿಷ್ಠ ಅಂದರೆ ಶೇ.5.72ಕ್ಕೆ ಇಳಿಕೆಯಾಗಿದೆ ಎಂದು ದೃಢಪಡಿಸಿರುವಂತೆಯೇ ಎಸ್‌ಬಿಐನ ವರದಿಯಲ್ಲಿಯೂ ಆಶಾದಾಯಕ ಅಂಶ ವ್ಯಕ್ತವಾಗಿದೆ. ಜನವರಿಯಿಂದ ಮಾರ್ಚ್ ಅವಧಿಯಲ್ಲಿ ಚಿಲ್ಲರೆ ಮಾರಾಟ ಕ್ಷೇತ್ರದ ಹಣದುಬ್ಬರ ಪ್ರಮಾಣ ಶೇ.4.7ರ ಆಸುಪಾಸಿನಲ್ಲಿ ಇರಲಿದೆ ಎಂದು ಅದರಲ್ಲಿ ಅಭಿಪ್ರಾಯಪಡಲಾಗಿದೆ.
“ಗ್ರಾಹಕ ಆಧಾರಿತ ಹಣದುಬ್ಬರ 2022ರ ಡಿಸೆಂಬರ್‌ನಲ್ಲಿ ಒಂದು ವರ್ಷ ಕನಿಷ್ಠಕ್ಕೆ ಅಂದರೆ ಶೇ.5.72ಕ್ಕೆ ಇಳಿಕೆಯಾಗಿದೆ. ತರಕಾರಿಗಳ ಬೆಲೆಗಳಲ್ಲಿ ಇಳಿಕೆಯಾದ್ದರಿಂದ ಈ ಬೆಳವಣಿಗೆಯಾಗಿದೆ. ರೈತರು ವಿವಿಧ ಬೆಳೆಗಳ ಬಿತ್ತನೆ ವಿಚಾರಲ್ಲಿ ಅನುಸರಿಸಿದ ವಿಧಾನ, ಉತ್ತಮ ಹವಾಗುಣ ಕೂಡ ಹಣದುಬ್ಬರ ಇಳಿಕೆಗೆ ಕಾರಣ’ ಎಂದು ಎಸ್‌ಬಿಐನ ಆರ್ಥಿಕ ಸಲಹೆಗಾರ ಸೌಮ್ಯ ಕಾಂತಿ ಘೋಷ್ ಹೇಳಿದ್ದಾರೆ. ಹೀಗಾಗಿ, ಮಾರ್ಚ್ ವೇಳೆಗೆ ಮತ್ತಷ್ಟು ಹಣದುಬ³ರ ಇಳಿಕೆಯಾಗಲಿದೆ ಎಂದು ಪ್ರತಿಪಾದಿಸಿದ್ದಾರೆ.
ಬಡ್ಡಿದರ ಏರಿಕೆ ಖಚಿತ:
ಹಣದುಬ್ಬರ ಪ್ರಮಾಣ ಇಳಿಕೆಯಾದರೂ, ಮುಂದಿನ ತಿಂಗಳು ನಡೆಯಲಿರುವ ಆರ್‌ಬಿಐ ಮುಂದಿನ ವಿತ್ತೀಯ ನೀತಿ ಪರಾಮರ್ಶೆ ಸಮಿತಿ ಸಭೆಯಲ್ಲಿ ಬಡ್ಡಿ ದರ ಏರಿಕೆ ಮಾಡಲಾಗುತ್ತದೆ ಎಂದು ವಿಶ್ಲೇಷಣೆ ನಡೆಸಲಾಗಿದೆ. 2022 ಡಿ.7ರಂದು ಆರ್‌ಬಿಐ ಶೇ.0.35 (35 ಬೇಸಿಸ್ ಪಾಯಿಂಟ್ಸ್) ಬಡ್ಡಿ ದರ ಏರಿಕೆ ಮಾಡಲಾಗಿತ್ತು. 2022ರ ಮೇನಿಂದ ಬಡ್ಡಿ ದರ ಏರಿಕೆಯಾಗುತ್ತಾ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.