ಬದುಕಬೇಕೆಂದಿದ್ದರೆ ಕಾಶ್ಮೀರ ಬಿಟ್ಟು ಹೋಗಿ
ಬಾರಾಮುಲ್ಲಾ ಜಿಲ್ಲೆಯಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿಕೊಂಡು ಬೆದರಿಕೆ
Team Udayavani, Apr 16, 2022, 7:55 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಸದ್ಯ ವಾಸಿಸುತ್ತಿರುವ ಕಾಶ್ಮೀರಿ ಪಂಡಿತರು ತಕ್ಷಣವೇ ಸ್ಥಳಬಿಟ್ಟು ತೆರಳಬೇಕು. ಬದುಕಬೇಕೆಂದಿದ್ದರೆ ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ಎಂದು ಹೇಳುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.
ಇದರಿಂದಾಗಿ 1990ರ ದಶಕದಲ್ಲಿ ಉಂಟಾಗಿದ್ದಂತೆ ಕಾಶ್ಮೀರ ಪಂಡಿತರನ್ನು ಉಗ್ರವಾದಿಗಳ ಗುಂಪು ಗುರಿ ಮಾಡಿಕೊಂಡು ಕೊಂದು ಹಾಕುವ ಪರಿಸ್ಥಿತಿ ಮತ್ತೆ ತಲೆದೋರಿತೇ ಎಂಬ ಪ್ರಶ್ನೆ ಎದುರಾಗಿದೆ.
ಬಾರಾಮುಲ್ಲಾ ಜಿಲ್ಲೆಯಲ್ಲಿಯೇ ಸಕ್ರಿಯವಾಗಿರುವ ಸ್ಥಳೀಯ ಉಗ್ರ ಸಂಘಟನೆ ಲಷ್ಕರ್-ಇ-ಇಸ್ಲಾಂ ವಲಸಿಗರು ಇರುವ ಶಿಬಿರಗಳ ಸಮೀಪವೇ ಈ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ.
ಇದನ್ನೂ ಓದಿ:ಮಳೆ ಅವಾಂತರಕ್ಕೆ 10ಕ್ಕೂ ಮನೆಗಳಿಗೆ ಹಾನಿ, ಸಿಡಿಲಿಗೆ ತೆಂಗಿನ ಮರ ಭಸ್ಮ
“ಕಾಶ್ಮೀರಿ ಪಂಡಿತರು ತಕ್ಷಣವೇ ಜಮ್ಮು-ಕಾಶ್ಮೀರವನ್ನು ಬಿಟ್ಟು ತೆರಳಲೇಬೇಕು. ಇಲ್ಲದೇ ಇದ್ದರೆ ಕಾಶ್ಮೀರಿ ಪಂಡಿತರ ಕುಟುಂಬಕ್ಕೆ ಹಾನಿ ಮಾಡಲಾಗುತ್ತದೆ. ನಾವು ನಿಮ್ಮನ್ನು ಹೆದರಿಸುತ್ತಿಲ್ಲ. ಈ ಸ್ಥಳ ಕೇವಲ ಮುಸ್ಲಿಮರಿಗೆ ಮತ್ತು ಅಲ್ಲಾಹನಿಗೆ ಸೇರಿದ್ದು. ಮುಸ್ಲಿಂ ಧರ್ಮವನ್ನು ಒಪ್ಪಿಕೊಳ್ಳುವವರು ಇಲ್ಲಿ ಇರಬಹುದು. ಹಿಂದೂಗಳು ಈ ಸ್ಥಳದಲ್ಲಿ ವಾಸಿಸಲು ಸಾಧ್ಯವೇ ಇಲ್ಲ’ ಎಂದು ಬರೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.