ಆದಾಯ ಮೂಲ ಘೋಷಣೆ ಕಡ್ಡಾಯ
Team Udayavani, Feb 17, 2018, 6:05 AM IST
ನವದೆಹಲಿ:ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಆಸ್ತಿ ವಿವರ ಘೋಷಣೆ ವೇಳೆ ಆದಾಯದ ಮೂಲವನ್ನೂ ಬಹಿರಂಗಪಡಿಸುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಅಷ್ಟೇ ಅಲ್ಲ, ಅಭ್ಯರ್ಥಿಯ ಪತ್ನಿ ಹಾಗೂ ಅವಲಂಬಿತರ ಆದಾಯದ ಮೂಲಗಳನ್ನು ಕೂಡ ಬಹಿರಂಗಪಡಿಸಬೇಕು ಎಂದಿದೆ.
ಈ ಕುರಿತು ಲಕ್ನೋ ಮೂಲದ ಎನ್ಜಿಒ ಲೋಕ ಪ್ರಹರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಈ ಆದೇಶ ನೀಡಿದೆ.
ಇಲ್ಲಿಯವರೆಗೆ ಅಭ್ಯರ್ಥಿಗಳು ಕೇವಲ ತಮ್ಮ ಆಸ್ತಿಯನ್ನು ಘೋಷಿಸುತ್ತಿದ್ದರೇ ವಿನಾ ಆಸ್ತಿಯ ಮೂಲದ ಬಗ್ಗೆ ಮಾಹಿತಿ
ನೀಡುತ್ತಿರಲಿಲ್ಲ. ಇನ್ನು ಮುಂದೆ ಮೂಲವನ್ನೂ ಬಹಿರಂಗಪಡಿಸ ಬೇಕಾಗುತ್ತದೆ. ಶಾಸಕರು ಹಾಗೂ ಸಂಸದರ ಆಸ್ತಿ, ಆದಾಯದಲ್ಲಿ ಭಾರೀ ಪ್ರಮಾಣದ ಏರಿಕೆ ಆಗಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿರುವುದಾಗಿ ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ. ಲೋಕಸಭೆಯ 26 ಸಂಸದರು, ರಾಜ್ಯಸಭೆಯ 11 ಸದಸ್ಯರು ಮತ್ತು 257 ಶಾಸಕರ ಆಸ್ತಿಯಲ್ಲಿ ಭಾರೀ ಹೆಚ್ಚಳವಾಗಿದೆ ಎಂದು ಲೋಕ ಪ್ರಹರಿ ಆರೋಪಿಸಿತ್ತು. ತದನಂತರ ತೆರಿಗೆ ಇಲಾಖೆ ಈ ಕುರಿತು ತನಿಖೆ ಆರಂಭಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.