ಆಮ್ಲಜನಕದ ಲಭ್ಯತೆಯನ್ನು ಹೆಚ್ಚಿಸುವದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ : ಮೋದಿ
Team Udayavani, Apr 30, 2021, 4:39 PM IST
ನವ ದೆಹಲಿ : ಕೋವಿಡ್ ಸೋಂಕಿನ ರೂಪಾಂತರಿ ಅಲೆ ದೊಡ್ಡ ಪ್ರಮಾಣದಲ್ಲಿ ದೇಶಕ್ಕೆ ಹೊಡೆತ ಕೊಟ್ಟಿದೆ. ಕಳೆದೊಂದುವಾರದಿಂದ ಮೂರುವರೆ ಲಕ್ಷಕ್ಕೂ ಮೀರಿ ಹೊಸ ಕೋವಿಡ್ ಪ್ರಕರಣಗಳು ದೇಶಾದ್ಯಂತ ದಾಖಲಾಗುತ್ತಿದೆ.
ಒಂದೆಡೆ ದೇಶದಲ್ಲಿ ಕೋವಿಡ್ ಸೋಂಕಿನ ರೂಪಾಂತರಿ ಅಲೆಯ ಕಾರಣದಿಂದಾಗಿ ಸೋಂಕಿಗೆ ಒಳಗಾದವರಿಗೆ ಆಕ್ಸಿಜನ್ ಕೊರತೆ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇದೆ ಎಂಬ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸರ್ಕಾರ ಕೇಂದ್ರ ಸಚಿವ ಸಂಪುಟ ಸಭೆಯನ್ನು ಕರೆದು ದೇಶದಲ್ಲಿನ ಬೇರೆ ಬೇರೆ ರಾಜ್ಯಗಳ ಕೋವಿಡ್ ಸೋಂಕಿನ ಪರಿಸ್ಥಿತಿಯ ಅವಲೋಕನವನ್ನು ಮಾಡಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ಸೋಂಕನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಹಲವು ಕಾರ್ಯತಂತ್ರಗಳನ್ನು ರೂಪಿಸುವಂತೆ ಸಭೆಯಲ್ಲಿ ಪಾಲ್ಗೊಂಡಿದ್ದ ಮಂತ್ರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಓದಿ : ಲಾಕ್ ಡೌನ್ ಲೆಕ್ಕಿಸದೆ ಸಂತೆ ಮಾಡಲು ಬಂದ ವ್ಯಾಪಾರಿಗಳು : ಪೊಲೀಸರಿಂದ ತೆರವು
ಇನ್ನು, ವೈದ್ಯಕೀಯ ಸೌಲಭ್ಯಗಳ ಅಗತ್ಯತೆಗಳನ್ನು ಪೂರೈಸುವುದರ ಬಗ್ಗೆ, ಆಮ್ಲಜನಕದ ಕೊರತೆಯನ್ನು ನೀಗಿಸುವುದು, ಲಸಿಕೆಗಳ ಲಭ್ಯತೆಯನ್ನು ಹೆಚ್ಚಳ ಮಾಡುವುದರ ಬಗ್ಗೆ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಇನ್ನು, ಈ ಬಗ್ಗೆ ತಮ್ಮ ಅಧಿಕೃತ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸಚಿವ ಸಂಪುಟ ಸಭೆಯಲ್ಲಿ ದೇಶದ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲಾಗಿದೆ. ರಾಜ್ಯಗಳೊಂದಿಗೆ ಸಮನ್ವಯ, ವೈದ್ಯಕೀಯ ಸಾಮರ್ಥ್ಯವನ್ನು ಹೆಚ್ಚಿಸುವುದು ಮತ್ತು ಆಮ್ಲಜನಕದ ಲಭ್ಯತೆಯನ್ನು ಹೆಚ್ಚಿಸುವುದು ಸೇರಿದಂತೆ ಕೈಗೊಳ್ಳುತ್ತಿರುವ ವಿವಿಧ ಕ್ರಮಗಳ ಬಗ್ಗೆ ಚರ್ಚಿಸಲಾಯಿತು ಎಂದು ಅವರು ಹಂಚಿಕೊಂಡಿದ್ದಾರೆ.
Reviewed the COVID-19 situation during the Council of Ministers meeting. Discussed the various steps being undertaken including coordination with the states, augmenting medical capacities and boosting oxygen availability. https://t.co/0k4fZDDws3
— Narendra Modi (@narendramodi) April 30, 2021
ಇನ್ನು, ಕಳೆದ 24 ಗಂಟೆಯಲ್ಲ 3,86,452 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ 2,97,540 ಜನ ಗುಣ ಮುಖರಾಗಿದ್ದಾರೆ. ಇದರಿಂದ ದೇಶದಲ್ಲಿ ಈವರೆಗೆ ಕೋವಿಡ್ ಸೋಂಕು ಪೀಡಿತರಾದವರ ಸಂಖ್ಯೆ 1,87,62,976ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿಗೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ. ಗುರುವಾರ 3,498 ಜನರು ಬಲಿ ಆಗಿದ್ದು, ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,08,330ಕ್ಕೆ ಏರಿಕೆ ಆಗಿದೆ.
ಓದಿ : ಕೋವಿಡ್ ಹೆಚ್ಚಳ: ಅಂತರಾಷ್ಟ್ರೀಯ ವಿಮಾನಯಾನ ನಿರ್ಬಂಧ ಮೇ 31ರವರೆಗೆ ವಿಸ್ತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.