Uttar Pradesh ಬಿಜೆಪಿಯಲ್ಲಿ ವಿಪ್ಲವ! ನಡ್ಡಾ ಭೇಟಿಯಾದ ಉಪಮುಖ್ಯಮಂತ್ರಿ ಮೌರ್ಯ
ರಾಜಭವನಕ್ಕೆ ಸಿಎಂ ಯೋಗಿ ದೌಡು
Team Udayavani, Jul 18, 2024, 7:00 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ಯಲ್ಲಿ ಆಗಿರುವ ಹಿನ್ನಡೆಯು ಉತ್ತರ ಪ್ರದೇಶ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದ್ದು, 48 ಗಂಟೆಗಳಲ್ಲೇ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಅವರು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು 2 ಬಾರಿ ಭೇಟಿಯಾಗಿ ಮಾತುಕತೆ ನಡೆಸಿ ರುವುದು ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಸಂಜೆ ರಾಜಭವನಕ್ಕೆ ದೌಡಾಯಿಸಿರುವುದು “ನಾಯಕತ್ವ ಬದಲಾವಣೆ’ಯ ಸುದ್ದಿಗೆ ಪುಷ್ಟಿ ನೀಡಿವೆ. ಆದರೆ ನಾಯಕತ್ವ ಬದಲಾವಣೆಯನ್ನು ವರಿಷ್ಠರು ತಳ್ಳಿ ಹಾಕಿದ್ದಾರೆ ಎನ್ನಲಾಗಿದೆ.
ಉತ್ತರ ಪ್ರದೇಶ ಬಿಜೆಪಿಯ ಇಬ್ಬರು ಅಗ್ರ ನಾಯಕರಾದ ಸಿಎಂ ಯೋಗಿ ಆದಿತ್ಯ ನಾಥ್ ಮತ್ತು ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ನಡುವೆ ಬಹಿರಂಗವಾಗಿಯೇ ಬಿರುಕು ಕಾಣಿಸಿಕೊಂಡಿದೆ. ಮೌರ್ಯ ಅವರು ಬುಧವಾರ ದಿಲ್ಲಿಗೆ ತೆರಳಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾರನ್ನು ಭೇಟಿ ಮಾಡಿದ್ದರು. ಈ ಸಭೆಯ ಅನಂತರ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಭೂಪೇಂದ್ರ ಚೌಧರಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದರು.
ಬಳಿಕ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಪ್ರಧಾನಿಯ ಭೇಟಿ ಬಳಿಕ ಉತ್ತರ ಪ್ರದೇಶ ಬಿಜೆಪಿ ಘಟಕದ ಅಧ್ಯಕ್ಷ ಭೂಪೇಂದ್ರ ಚೌಧರಿ ಚುನಾ ವಣೆ ಹಿನ್ನಡೆಯ ಹೊಣೆಯನ್ನು ಹೊತ್ತು ಕೊಂಡು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅತೃಪ್ತಿಯಿಂದ ಕುದಿಯು ತ್ತಿರುವ ಉ.ಪ್ರ. ಬಿಜೆಪಿಯ ಸಂಘಟನೆಯಲ್ಲಿ ಅಮೂಲಾಗ್ರ ಬದಲಾವಣೆ ಮಾಡಲು ವರಿಷ್ಠರು ಮುಂದಾಗಿದ್ದಾರೆಂದೂ ಹೇಳಲಾಗಿದೆ.
ರಾಜಭವನಕ್ಕೆ ಯೋಗಿ ಭೇಟಿ
ಬಿಜೆಪಿ ಘಟಕದ ಪುನರ್ ಸಂಘಟನೆಯ ವದಂತಿಯ ಬೆನ್ನಲ್ಲೇ ಸಿಎಂ ಯೋಗಿ ಆದಿತ್ಯನಾಥ್ ಬುಧವಾರ ಸಂಜೆ ರಾಜಭವನಕ್ಕೆ ಭೇಟಿ ನೀಡಿರುವುದು ಉಹಾಪೋಹಗಳಿಗೆ ಕಾರಣವಾಗಿದೆ. ಮಳೆಗಾಲದ ಅಧಿವೇಶನಕ್ಕಾಗಿ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಬಿಜೆಪಿಯ ಮೂಲಗಳ ಪ್ರಕಾರ, ಸಚಿವ ಸಂಪುಟ ಪುನಾರಚನೆ ಹಿನ್ನೆಲೆಯಲ್ಲಿ ಭೇಟಿ ನಡೆದಿದೆ ಎನ್ನಲಾಗಿದೆ.
ಸಿಎಂ ಯೋಗಿ ವಿರುದ್ಧ ಅತೃಪ್ತಿ
ಚುನಾವಣೆ ಹಿನ್ನಡೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಕಾರ್ಯಶೈಲಿಯೇ ಕಾರಣ ಎಂದು ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ ಬೆಂಬಲಿಗ ನಾಯಕರ ವಾದವಾಗಿದೆ. ಅಲ್ಲದೇ ಕಳೆದ ಒಂದು ತಿಂಗಳಲ್ಲಿ ಸಿಎಂ ಕರೆದ ಬಹುತೇಕ ಸಭೆಗಳಿಗೆ ಮೌರ್ಯ ಅವರು ಗೈರು ಹಾಜರಾಗಿದ್ದಾರೆ.
ಬಿಜೆಪಿಯಲ್ಲಿ ಅಧಿಕಾರಕ್ಕಾಗಿ
ಕಚ್ಚಾಟ: ಸಮಾಜವಾದಿ ಪಕ್ಷ
ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್ ಯಾದವ್ ಪ್ರತಿಕ್ರಿಯಿಸಿ, ಅಧಿಕಾರಕ್ಕಾಗಿ ಬೇರೆ ಪಕ್ಷ ಗಳೊಂದಿಗೆ ವಿಧ್ವಂಸಕ ರಾಜಕೀಯ ಮಾಡುತ್ತಿದ್ದ ಬಿಜೆಪಿಗೆ ತಿರುಗುಬಾಣವಾಗಿದ್ದು, ಪಕ್ಷದೊಳಗೇ ಕಚ್ಚಾಟ ನಡೆದಿದೆ. ಅದೇ ಕಾರಣ ಪಕ್ಷದೊಳಗೆ ಕಿತ್ತಾಟ ಹೆಚ್ಚಾಗಿದೆ. ಜನರ ಬಗ್ಗೆ ಯೋಚಿಸುವವರು ಬಿಜೆಪಿಯಲ್ಲಿ ಒಬ್ಬರೂ ಇಲ್ಲ ಎಂದು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.