ಸೇನಾ ಕಾರ್ಯಾಚರಣೆ ಪುನರಾರಂಭ: ಸಿಎಂ ಮೆಹಬೂಬಗೆ ಅಸಮಾಧಾನ?


Team Udayavani, Jun 19, 2018, 12:18 PM IST

mehabooba-700.jpg

ಜಮ್ಮು : ರಮ್ಜಾನ್‌ ಮುಗಿದೊಡನೆಯೇ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಬೇಟೆಯಾಡುವ ಸೇನಾ ಕಾರ್ಯಾಚರಣೆಯನ್ನು ಪುನರಾರಂಭಿಸುವ ಕೇಂದ್ರ ಸರಕಾರದ ನಿರ್ಧಾರ ಪಿಡಿಪಿ ಮುಖ್ಯಸ್ಥೆ  ಮತ್ತು ಸಿಎಂ ಮೆಹಬೂಬ ಮುಫ್ತಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ಅವರು ದಿಲ್ಲಿಯಲ್ಲಿನ ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ಬಿಜೆಪಿ ಶಾಸಕರು ಮತ್ತು ರಾಜ್ಯ ಘಟಕದ ನಾಯಕರೊಂದಿಗೆ ಇಂದು ಸಭೆ ನಡೆಸಲಿದ್ದಾರೆ. 

ವರದಿಗಳ ಪ್ರಕಾರ ಅಮಿತ್‌ ಶಾ ಅವರು ಸಭೆಯಲ್ಲಿ ಜಮ್ಮು ಕಾಶ್ಮೀರದ ರಾಜಕೀಯ ಮತ್ತು ಭದ್ರತಾ ಸ್ಥಿತಿಗತಿಯನ್ನು ಚರ್ಚಿಸುವವರಿದ್ದಾರೆ. 

ಬಿಜೆಪಿ ರಾಜ್ಯ ಘಟಕದ ನಾಯಕ ರವೀಂದ್ರ ರೈನಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಅಶೋಕ್‌ ಕೌಲ್‌ ಅವರನ್ನು ಕೂಡ ಸಭೆಗೆ ಕರೆಸಿಕೊಳ್ಳಲಾಗಿದೆ. 

ಜಮ್ಮು ಕಾಶ್ಮೀರದಲ್ಲಿನ ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷಗಳಾಗಿರುವ ಬಿಜೆಪಿ – ಪಿಡಿಪಿ ನಡುವೆ ಈಗ ಎಲ್ಲವೂ ಸರಿಯಾಗಿಲ್ಲ ಎಂಬುದೇ ಅಮಿತ್‌ ಶಾ ಸಭೆಯ ಮುಖ್ಯ ವಿಷಯವಾಗಿದೆ. 

ಈಚೆಗೆ ಜಮ್ಮು ಕಾಶ್ಮೀರ ಸಚಿವ ಸಂಪುಟವನ್ನು ಪುನಾರಚಿಸಲಾದ ಬಳಿಕದಲ್ಲಿ ಅಮಿತ್‌ ಶಾ ಅವರು ರಾಜ್ಯದ ಬಿಜೆಪಿ ಶಾಸಕರನ್ನು ದಿಲ್ಲಿಗೆ ಕರೆಸಿಕೊಂಡು ಸಭೆ ನಡೆಸುತ್ತಿರುವುದು ಇದು ಎರಡನೇ ಬಾರಿಯಾಗಿದೆ. 

ಇದೇ ಜೂನ್‌ 23ರಿಂದ ಎರಡು ದಿನಗಳ ಜಮ್ಮು ಭೇಟಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಅಲ್ಲಿಗೆ ಹೋಗಲಿದ್ದಾರೆ. 

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಯೋಧ ಔರಂಗಜೇಬ್‌ ಮತ್ತು ರೈಸಿಂಗ್‌ ಕಾಶ್ಮೀರ ಪತ್ರಿಕೆ ಮುಖ್ಯ ಸಂಪಾದಕ ಶುಜಾತ್‌ ಭುಕಾರಿ ಅವರ ಹತ್ಯೆ ನಡೆದ ಕಾರಣ ರಮ್ಜಾನ್‌ ಮುಗಿದ ಬೆನ್ನಿಗೇ ಕೇಂದ್ರ ಸರಕಾರ ಜಮ್ಮು ಕಾಶ್ಮೀರದಲ್ಲಿನ ಉಗ್ರ ನಿಗ್ರಹ ಸೇನಾ ಕಾರ್ಯಾಚರಣೆಯನ್ನು ಪುನಾರಂಭಿಸಲು ನಿರ್ಧರಿಸಿತ್ತು. 

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

modi (4)

ಇಲಾಖಾ ಮುಖ್ಯಸ್ಥರಿಗೆ “ಮನ್‌ ಕೀ ಬಾತ್‌’ ಕೇಳುವುದು ಕಡ್ಡಾಯ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.