ಸಾರ್ವಜನಿಕ ಆಸ್ತಿ ನಷ್ಟಕ್ಕೆ ಗಲಭೆ ಮಾಡಿದವರೇ ಹೊಣೆ
Team Udayavani, Nov 29, 2017, 6:10 AM IST
ಹೊಸದಿಲ್ಲಿ: ಗಲಭೆ, ಮುಷ್ಕರ, ಬಂದ್‌ಗೆ ಕರೆ ನೀಡಿ, ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವವರೇ ಎಚ್ಚರ! ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವುಂಟುಮಾಡಿ, ಯಾರಧ್ದೋ ಜೀವಗಳ ಜತೆ ಚೆಲ್ಲಾಟವಾಡುವವರಿಗೆ ಸರಿಯಾದ ಪಾಠ ಕಲಿಸಲು ಸುಪ್ರೀಂ ಕೋರ್ಟ್ ಮುಂದಾಗಿದೆ.
ಗಲಭೆ, ಮುಷ್ಕರಗಳ ಸಂದರ್ಭಗಳಲ್ಲಿ ಆಗುವ ಸಾರ್ವಜನಿಕ ಅಥವಾ ಖಾಸಗಿ ಆಸ್ತಿ ಪಾಸ್ತಿ ನಷ್ಟವನ್ನು ಅಂದಾಜು ಮಾಡಲು ಹಾಗೂ ಇಂಥ ಸಂದರ್ಭಗಳಲ್ಲಿ ಸಾವಿಗೀಡಾದವರಿಗೆ, ಗಾಯಗೊಂಡವರಿಗೆ ಪರಿಹಾರ ನಿಗದಿಗೊಳಿಸಲು ಪ್ರತಿ ರಾಜ್ಯದಲ್ಲಿ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತ್ಯೇಕ ನ್ಯಾಯಾಲಯಗಳನ್ನು ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳ ವಾರ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ. ಅಲ್ಲದೆ, ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗುವ ಸಂಘಟನೆಗಳು, ಸದಸ್ಯರನ್ನೇ ತಪ್ಪಿಗೆ ಹೊಣೆಯಾಗಿಸಿ, ಅವರ ವಿರುದ್ಧ ಕ್ರಿಮಿನಲ್ ಕ್ರಮ ಜರಗಿಸುವಂತೆಯೂ ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ.
2009ರಲ್ಲಿ ಹಿಂಸಾತ್ಮಕ ಗಲಭೆಗಳ ವಿಚಾರಣೆಗೆ ಪ್ರತ್ಯೇಕ ವ್ಯವಸ್ಥೆ ರೂಪಿಸಬೇಕೆಂದು ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವು ಇನ್ನೂ ಜಾರಿಗೊಂಡಿಲ್ಲ ಎಂದು ಕೋಶಿ ಜಾಕೋಬ್ ಎಂಬ ವಕೀಲರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಆದರ್ಶ್ ಕುಮಾರ್ ಗೋಯೆಲ್ ಹಾಗೂ ಯು.ಯು. ಲಲಿತ್ ಅವರುಳ್ಳ ನ್ಯಾಯಪೀಠ, ಕೇಂದ್ರ ಸರಕಾರಕ್ಕೆ ಈ ಸೂಚನೆ ನೀಡಿತು.
ಇಂಥ ನ್ಯಾಯಾಲಯಗಳಲ್ಲಿ ಒಬ್ಬರು ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯ ಜಿಲ್ಲಾ ಮಟ್ಟದ ನ್ಯಾಯಾಧೀಶರನ್ನು ನೇಮಿಸಬೇಕು. ಅಲ್ಲದೆ, ಈ ನ್ಯಾಯಾಲಯಗಳು ಆಯಾ ರಾಜ್ಯಗಳ ಹೈಕೋರ್ಟ್‌ಗಳ ಸಲಹೆಗಳ ಮೇರೆಗೆ ಆಸ್ತಿಪಾಸ್ತಿ ನಷ್ಟವನ್ನು ಅಂದಾಜಿಸಿ, ಘಟನೆಯಲ್ಲಿ ಜೀವ ಕಳೆದುಕೊಂಡ, ಅಂಗವಿಕಲರಾದ ದುರ್ದೈವಿಗಳಿಗೆ ಪರಿಹಾರ ನಿಗದಿಗೊಳಿಸಿ ತನ್ನ ಅನಿಸಿಕೆ ಯನ್ನು ಸಂಬಂಧಪಟ್ಟ ಹೈಕೋರ್ಟ್‌ಗೆ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್
ಹೇಳಿದೆ. ಅಲ್ಲದೆ, ಗಲಭೆಗಳಿಗೆ ಕಾರಣವಾದ ಸಂಘಟನೆಗಳ ನಾಯಕರು, ಸದಸ್ಯರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಸೂಚಿಸಿದೆ.
ಸಲಹೆ ಸ್ವೀಕಾರ: ವಿಚಾರಣೆ ವೇಳೆ ಸರಕಾರದ ಪರವಾಗಿ ಹಾಜರಿದ್ದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ನ್ಯಾಯಾಲಯದ ಸೂಚನೆಯನ್ನು ಸ್ವಾಗತಿಸಿದರಲ್ಲದೆ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ನಿಗ್ರಹ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರಕಾರ ಈಗಾಗಲೇ ಕಾರ್ಯೋನ್ಮುಖವಾಗಿದ್ದು, ಕೇಂದ್ರ ಕಾನೂನು ಸಚಿವಾಲಯದ ಜಾಲತಾಣದಲ್ಲಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.