ಲಾಲು ಪ್ರಸಾದ್ ಯಾದವ್‌ಗೆ ಡಿಪ್ರೆಶನ್ : ರಿಮ್ಸ್ ವೈದ್ಯಕೀಯ ವರದಿ
Team Udayavani, Sep 11, 2018, 11:46 AM IST
ರಾಂಚಿ : ಬಹುಕೋಟಿ ವೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಸೆರೆಮನೆಯಲ್ಲಿ ಮಾನಸಿಕ ಒತ್ತಡದಿಂದ (ಡಿಪ್ರೆಶನ್) ಬಳಲುತ್ತಿದ್ದಾರೆ ಎಂದು ಇಲ್ಲಿನ ರಾಜೇಂದ್ರ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸಸ್ (ಆರ್‌ಐಎಂಎಸ್)ನ ನಿರ್ದೇಶಕ ಆರ್ ಕೆ ಶ್ರೀವಾಸ್ತವ ತಿಳಿಸಿದ್ದಾರೆ.
ಲಾಲು ಡಿಪ್ರೆಶನ್ ನಿಂದ ಬಳಲುತ್ತಿರುವುದು ಈ ಹಿಂದೆ ಏಮ್ಸ್ ಮೆಡಿಕಲ್ ಡಿಸ್‌ಚಾರ್ಜ್ ಸ್ಲಿಪ್‌ನಲ್ಲಿ ಕೂಡ ಉಲ್ಲೇಖೀಸಲಾಗಿತ್ತು. ಇದೀಗ “ರಿಮ್ಸ್’ನಲ್ಲಿ ಲಾಲು ಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಕೂಡ ಇದನ್ನೇ ತಮ್ಮ ವರದಿಯಲ್ಲೂ ಉಲ್ಲೇಖೀಸಿದ್ದಾರೆ ಎಂದು ಶ್ರೀವಾಸ್ತವ ಹೇಳಿದರು.
ಲಾಲು ಅವರ ಇಡಿಯ ಕುಟುಂಬವೇ ಒಂದೆಡೆ ಭ್ರಷ್ಟಾಚಾರದ ಕೇಸುಗಳಲ್ಲಿ ಮುಳುಗಿ ಹೋಗಿದೆಯಾದರೆ ಇನ್ನೊಂದೆಡೆ ಅವರ ಇಬ್ಬರು ಪುತ್ರರಲ್ಲಿ ರಾಜಕೀಯ ಪಾರಮ್ಯದ ಜಟಾಪಟಿ ನಡೆಯುತ್ತಿದೆ. ಈ ಕಾರಣಗಳೇ ಲಾಲು ಡಿಪ್ರೆಶನ್ಗೆ ಕಾರಣವಾಗಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ.
ಲಾಲು ಅವರು ತಮ್ಮ ಕಿರಿಯ ಪುತ್ರ ತೇಜಸ್ವಿ ಯಾದವ್ ತಮ್ಮ ಉತ್ತರಾಧಿಕಾರಿಯಾಗಬೇಕೆಂಬ ಒಲವನ್ನು ಬಹಿರಂಗವಾಗಿ ತೋರಿಸಿಕೊಂಡಿದ್ದಾರೆ. ಆದರೆ ಲಾಲು ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ (ಹಿಂದಿನ ಮಹಾ ಘಟಬಂಧನ ಸರಕಾರದಲ್ಲಿ ಹಿರಿಯ ಸಚಿವರಾಗಿದ್ದವರು) ಅವರಿಗೆ ಸಾರ್ವಜನಿಕವಾಗಿ ಉತ್ತಮ ಪ್ರತಿಷ್ಠೆ, ಸ್ಥಾನಮಾನ, ಗೌರವಾದರಗಳಿವೆ ಎಂದು ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಾಸರಗೋಡು: ಬೈಕ್ ಢಿಕ್ಕಿ; ವಿದ್ಯಾರ್ಥಿಗೆ ಗಂಭೀರ ಗಾಯ
Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.