ಲಾಲು, ರಾಹುಲ್ ಇದ್ದದ್ದಕ್ಕೆ ಶತಮಾನೋತ್ಸವ ಬಹಿಷ್ಕರಿಸಿದ ಬಿಜೆಪಿ
Team Udayavani, Apr 18, 2017, 3:45 AM IST
ಪಟ್ನಾ: ಚಂಪಾರಣ್ ಸತ್ಯಾಗ್ರಹಕ್ಕೆ 100 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಬಿಹಾರ ರಾಜಧಾನಿ ಪಟ್ನಾದಲ್ಲಿ ಆಯೋಜಿ ಸಲಾಗಿದ್ದ ಕಾರ್ಯಕ್ರಮಕ್ಕೆ ಬಿಜೆಪಿ ನಾಯಕರು ಕೊನೆಯ ಹಂತದಲ್ಲಿ ಬಹಿಷ್ಕಾರ ಹಾಕಿದ್ದಾರೆ. ಮೇವು ಹಗರಣದಲ್ಲಿ ಆರೋಪಕ್ಕೆ ಗುರಿಯಾಗಿ ಶಿಕ್ಷೆಗೀಡಾಗಿರುವ ಆರ್ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಜತೆಗೆ ವೇದಿಕೆಯಲ್ಲಿ ಕುಳಿತುಕೊಂಡಿದ್ದೇ ನಾಯಕರ ಕೋಪಕ್ಕೆ ಕಾರಣ. ಗಮನಾರ್ಹ ಅಂಶವೆಂದರೆ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡ ಇದ್ದರು.
ಬೆಳವಣಿಗೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ “ಶಿಕ್ಷೆಗೆ ಗುರಿಯಾಗಿರುವ ನಾಯಕರೊಬ್ಬರನ್ನು ಮಹಾತ್ಮಾ ಗಾಂಧಿ ಬ್ರಿಟೀಷರ ವಿರುದ್ಧ ನಾಗರಿಕ ಅಸಹಕಾರ ಚಳವಳಿಗೆ ಕರೆ ನೀಡಿ 100 ವರ್ಷ ತುಂಬಿದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಇದೆಷ್ಟು ಸರಿ,’ ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ನ್ಯಾಷನಲ್ ಹೆರಾಲ್ಡ್ ಕಂಪನಿಯ ಆಸ್ತಿ ದುರುಪಯೋಗ ಮಾಡಿಕೊಂಡ ಆರೋಪದ ಬಗ್ಗೆ ವಿಚಾರಣೆಯಾಗುತ್ತಿದೆ. ಹೀಗಿದ್ದರೂ ಅವರನ್ನು ಆಹ್ವಾನಿಸಲಾಗಿದೆ ಎಂದು ದೂರಿದರು. ಮತ್ತೂಬ್ಬ ಬಿಜೆಪಿ ನಾಯಕ ಮಂಗಲ್ ಪಾಂಡೆ ಮಾತನಾಡಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಭಾಗವಹಿಸಬೇಕಾಗಿತ್ತು. ಅಂತಿಮ ಕ್ಷಣದಲ್ಲಿ ಅವರೂ ಹಿಂದೆ ಸರಿದರು ಎಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ “ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿ ಸದೇ ಇರುವವರು ಮತ್ತು ನಾಥೂರಾಮ್ ಗೋಡ್ಸೆಗೆ ಬೆಂಬಲ ನೀಡುವವರು ಈಗ ಬಹಿಷ್ಕಾರದ ಪಾಠ ಹೇಳುತ್ತಿದ್ದಾರೆ,’ ಎಂದು ಲೇವಡಿ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ ಬಿಜೆಪಿ ನಾಯಕರನ್ನು ಛೇಡಿಸಿ ಮಾತನಾಡಿದ ಮುಖ್ಯಮಂತ್ರಿ ನಿತೀಶ್ ಕುಮಾರ್ “ಕಾರ್ಯಕ್ರಮಕ್ಕೆ ಬಂದವರು, ಬಾರದೇ ಇರುವವರಿಗೂ ಧನ್ಯವಾದ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu;ಸೈಕ್ಲೋನ್ ದುರ್ಬಲವಾದ್ರೂ ಭಾರೀ ಮಳೆ?
2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್ ಸಂಗ್ರಹ: ಗಡ್ಕರಿ
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.