ಲಾಲು ಸೊಸೆ ಐಶ್ವರ್ಯಾ ರಾಜಕೀಯಕ್ಕೆ? RJD ಸ್ಥಾಪನಾ ದಿನ ಪೋಸ್ಟರ್
Team Udayavani, Jul 4, 2018, 7:15 PM IST
ಪಟ್ನಾ : ಬಹು ಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿ ಪ್ರಕೃತ ಮುಂಬಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಪಕ್ಷದ ಸ್ಥಾಪನಾ ದಿನದ ಪೋಸ್ಟರ್ ಈಗ ಹೊಸ ಊಹಾಪೋಹಗಳಿಗೆ ಕಾರಣವಾಗಿದೆ. ಆರ್‌ಜೆಡಿ ಸ್ಥಾಪನಾ ದಿನ ಇದೇ ಜುಲೈ 5ರಂದು ನಡೆಯಲಿದೆ.
ಸ್ಥಾಪನಾ ದಿನದ ಪೋಸ್ಟರ್‌ನಲ್ಲಿ ಈಚೆಗೆ ವಿವಾಹಿತರಾದ ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ಮತ್ತು ಅವರ ಪತ್ನಿ ಐಶ್ವರ್ಯಾ ರಾಯ್ ವಧೂವರರಾಗಿ ಕೈಮುಗಿಯುವ ಫೋಟೋ ಇದೆ. ಯಾದವ್ ಕುಟುಂಬದ ನೂತನ ವಧು ಐಶ್ವರ್ಯಾ ಈಗಿನ್ನು ರಾಜಕೀಯ ರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸಂದೇಶವನ್ನು ಇದು ನೀಡುವಂತಿದೆ. ಹಾಗಿದ್ದರೂ ಐಶ್ವರ್ಯಾ ರಾಜಕಾರಣ ಪ್ರವೇಶಿಸುವುದಿಲ್ಲ ಎಂದು ತೇಜ್ ಪ್ರತಾಪ್ ಈ ಹಿಂದೆ ಪದೇ ಪದೇ ಹೇಳಿದ್ದರು.
ಇದೇ ವೇಳೆ ಆರ್‌ಜೆಡಿ ಸ್ಥಾಪನಾ ದಿನದ ಆಹ್ವಾನ ಪತ್ರಿಕೆ ಇನ್ನೊಂದು ರೀತಿಯ ವಿವಾದವನ್ನು ಹುಟ್ಟು ಹಾಕಿದೆ. ಅದೆಂದರೆ ಈ ಆಹ್ವಾನ ಪತ್ರಿಕೆಯಲ್ಲಿ ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ಮತ್ತು ಪುತ್ರಿ ಮೀಸಾ ಭಾರ್ತಿ ಅವರ ಹೆಸರೇ ನಾಪತ್ತೆಯಾಗಿವೆ.
ಸ್ಥಾಪನಾ ದಿನದ ಕಾರ್ಯಕ್ರಮವನ್ನು ಬಹುತೇಕ ಲಾಲು ಕಿರಿಯ ಪುತ್ರ ತೇಜಸ್ವಿ ಯಾದವ್ ಉದ್ಘಾಟಿಸುವ ಸಾಧ್ಯತೆ ಇದೆ. ತೇಜಸ್ವಿ ಅವರು ಬಿಹಾರದಲ್ಲಿ ಈ ಹಿಂದೆ ಇದ್ದ ಮಹಾಘಟಬಂಧನ ಸರಕಾರದಲ್ಲಿ ಉಪ ಮುಖ್ಯಮಂತ್ರಿಯಾಗಿದ್ದರು.
ಆರ್‌ಜೆಡಿ ವಕ್ತಾರ ಚಿತ್ತರಂಜನ್ ಗರ್ಗ್ ಹೇಳಿರುವ ಪ್ರಕಾರ ಪಕ್ಷದ ಸ್ಥಾಪನಾ ದಿನ ಪಟ್ನಾದಲ್ಲಿನ ಪಕ್ಷದ ಕಾರ್ಯಾಲಯದಲ್ಲಿ ನಡೆಯಲಿದೆ; ಆರ್‌ಜೆಡಿ ಮುಖ್ಯಸ್ಥ ಡಾ. ರಾಮಚಂದ್ರ ಪುರ್ವೆ ಉಸ್ತುವಾರಿ ನಡೆಸಲಿದ್ದಾರೆ. ಲಾಲು ಪ್ರಸಾದ್ ಯಾದವ್ ಅವರು ಪ್ರಕೃತ ಮುಂಬಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಪಕ್ಷದ ಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ತೇಜಸ್ವಿ ಯಾದವ್ ಅವರೇ ಮುಖ್ಯ ವ್ಯಕ್ತಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಪ್ರಭಾತ್ ಖಬರ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.