ಮಹಿಳಾ ಪ್ರಯಾಣಿಕರ ಸುರಕ್ಷೆಗೆ ರೈಲುಗಳಲ್ಲಿ panic button
Team Udayavani, May 16, 2018, 11:22 AM IST
ಲಕ್ನೋ : ಮಹಿಳಾ ರೈಲು ಪ್ರಯಾಣಿಕರ ಹೆಚ್ಚಿನ ಸುರಕ್ಷೆಗಾಗಿ ಭದ್ರತೆಯನ್ನು ಬಲಪಡಿಸುವುದಕ್ಕಾಗಿ ಈಶಾನ್ಯ ರೈಲ್ವೆ ತನ್ನ ರೈಲುಗಳಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸ್ ಸಿಬಂದಿಗಳನ್ನು ನಿಯೋಜಿಸಲು ಮತ್ತು ರೈಲಿನ ಕೋಚ್ಗಳಲ್ಲಿ ಪ್ಯಾನಿಕ್ ಬಟನ್ ಗಳನ್ನು ಅಳವಡಿಸಲು ಉದ್ದೇಶಿಸಿದೆ.
ಈಶಾನ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸಂಜಯ್ ಯಾದವ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ “ಈಶಾನ್ಯ ರೈಲ್ವೆ ಈ ವರ್ಷ ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಗೆ ಆದ್ಯತೆ ನೀಡಿದ್ದು ಆ ಪ್ರಕಾರ ನಗರ ಹೊರವಲಯದ ರೈಲುಗಳಲ್ಲಿ ರಾತ್ರಿ ವೇಳೆ ಮಹಿಳಾ ಪೊಲೀಸರನ್ನು ನಿಯೋಜಿಸಲು ನೇಮಕಾತಿ ಮಾಡಲು ಉದ್ದೇಶಿಸಿದೆ ಎಂದು ಹೇಳಿದರು.
ರೈಲುಗಳಲ್ಲಿ ಒಂಟಿಯಾಗಿ ಪ್ರಯಾಣಿಸುವ ಮಹಿಳೆಯರಿಗೆ ತೊಂದರೆಯಾಗಿರುವ ಹಲವಾರು ದೂರುಗಳು ಬಂದಿರುವ ಕಾರಣ ರೈಲಿನ ಕೋಚ್ಗಳಲ್ಲಿ ಪ್ಯಾನಿಕ್ ಬಟನ್ ಅಳವಡಿಸಲು ಕೂಡ ಉದ್ದೇಶಿಸಲಾಗಿದೆ; ಈ ಪ್ಯಾನಿಕ್ ಬಟನ್ಗಳು ಗಾರ್ಡ್ ಕೋಚ್ನೊಂದಿಗೆ ಸಂಪರ್ಕ ಹೊಂದಿರುತ್ತವೆ ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.