ಫೆ.16ರ ವರೆಗೆ ಬಂಧನದಿಂದ ರಕ್ಷಣೆ ಪಡೆದ ರಾಬರ್ಟ್ ವಾದ್ರಾ
Team Udayavani, Feb 2, 2019, 10:46 AM IST
ಹೊಸದಿಲ್ಲಿ : ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಅಳಿಯ ಮತ್ತು ಪ್ರಿಯಾಂಕಾ ಗಾಂಧಿ ಅವರ ಪತಿ, ಉದ್ಯಮಿ ರಾಬರ್ಟ್ ವಾದ್ರಾ ಅವರಿಗೆ ಹಣಕಾಸು ಅಕ್ರಮ ಕೇಸಿನಲ್ಲಿ ಫೆ.16ರ ವರೆಗಿನ ಅವಧಿಗೆ ದಿಲ್ಲಿ ಕೋರ್ಟಿನಿಂದ ನಿರೀಕ್ಷಣಾ ಜಾಮೀನು ಸಿಕ್ಕಿದೆ.
ಲಂಡನ್ ಆಸ್ತಿಪಾಸ್ತಿ ವ್ಯವಹಾರಕ್ಕೆ ಸಂಬಂಧಿಸಿದಂತೆ ರಾಬರ್ಟ್ ವಾದ್ರಾ ಎಸಗಿರುವರೆಂದು ಆರೋಪಿಸಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಕೇಸಿನ ತನಿಖೆಗೆ ವಾದ್ರಾ ಸಹಕರಿಸಲಿದ್ದಾರೆ ಎಂದು ಅವರ ವಕೀಲರು ಹೇಳಿದ್ದಾರೆ.
ವಾದ್ರಾ ಅವರ ನಿಕಟವರ್ತಿ ಮನೋಜ್ ಅರೋರಾ ಅವರು ಇದೇ ಕೇಸಿಗೆ ಸಂಬಂಧಿಸಿ ಈಗಾಗಲೇ ಬಂಧನದಿಂದ ರಕ್ಷಣೆ ಪಡೆದುಕೊಂಡಿದ್ದಾರೆ.
ತನಿಖಾಧಿಕಾರಿಗಳ ಪ್ರಕಾರ ಅರೋರಾ ಅವರೇ ಈ ಕೇಸಿನ ಪ್ರಧಾನ ಆರೋಪಿಯಾಗಿದ್ದಾರೆ; ಏಕೆಂದರೆ ವಾದ್ರಾ ಅವರ ಬಹಿರಂಗಪಡಿಸದ ಸಾಗರೋತ್ತರ ಆಸ್ತಿಪಾಸ್ತಿ ಬಗ್ಗೆ ಆತನಿಗೆ ಪೂರ್ಣ ಮಾಹಿತಿ ಇದ್ದು ಆತನೇ ಲಂಡನ್ ಆಸ್ತಿಪಾಸ್ತಿ ಖರೀದಿಗೆ ಹಣದ ವ್ಯವಸ್ಥೆ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.