ರೋಸ್ ವ್ಯಾಲಿ ಕೇಸ್ : ಇಡಿ ಯಿಂದ 40 ಕೋಟಿ ಚಿನ್ನ, ವಜ್ರ ವಶ
Team Udayavani, Dec 28, 2017, 4:42 PM IST
ಕೋಲ್ಕತ : ರೋಸ್ ವ್ಯಾಲಿ ಚಿಟ್ ಫಂಡ್ ಹಗರಣ ಕೇಸಿಗೆ ಸಂಬಂಧಿಸಿದಂತೆ ತಾನಿಂದು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ವಜ್ರಗಳು, ರೂಬಿಗಳು, ಸೆಫಾಯರ್‌ಗಳು ಮತ್ತು ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ ಹೇಳಿದೆ.
ರೋಸ್ ವ್ಯಾಲಿ ಕೇಸ್‌ನಲ್ಲಿ ಶಾಮೀಲಾಗಿರುವ ಆದ್ರಿಜಾ ಗೋಲ್ಡ್ ಕಾರ್ಪೊರೇಶನ್ ಲಿಮಿಟೆಡ್ ಚಿನ್ನಾಭರಣ ಸಂಸ್ಥೆಯ ವಿವಿಧ ಮಳಿಗೆಗಳ ಮೇಲೆ ನಡೆಸಿದ ದಾಳಿಯಲ್ಲಿ 40 ಕೋಟಿ ರೂ. ಮೌಲ್ಯದ ಬೆಲೆಬಾಳುವ ಚಿನ್ನ ವಜ್ರದ ಒಡವೆಗಳನ್ನು ತಾನು ವಶಪಡಿಸಿಕೊಂಡಿರುವುದಾಗಿ ಇಡಿ ಪ್ರಕಟನೆಯೊಂದರಲ್ಲಿ ಹೇಳಿತು.
ಆದ್ರಿಜಾ ಗೋಲ್ಡ್ ಕಾರ್ಪೊರೇಶನ್ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಗೌತಮ್ ಕುಂಡು ಮತ್ತು ಇತರರ ಮàಲೆ 2014ರಲ್ಲೇ ಜಾರಿ ನಿರ್ದೇಶನಾಲಯ ಹಣ ದುರುಪಯೋಗ ತಡೆ ಕಾಯಿದೆಯಡಿ ಎಫ್ಐಆರ್ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಯುತ್ತಿದೆ ಎಂದು ಇಡಿ ಹೇಳಿದೆ.
ಕುಂಡು ಅವರನ್ನು 2015ರಲ್ಲಿ ಕೋಲ್ಕತದಲ್ಲಿ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.