AK-47 ; ಪತ್ನಿಗೆ ಗನ್ ಗಿಫ್ಟ್ ಕೊಟ್ಟ ಟಿಎಂಸಿ ಮಾಜಿ ಮುಖಂಡ ರಿಯಾಜುಲ್ ಹಕ್: ಆಕ್ರೋಶ
ವಿರೋಧ ವ್ಯಕ್ತವಾಗುತ್ತಿದ್ದಂತೆ ಪೋಸ್ಟ್ ಡಿಲೀಟ್ , ಸ್ಪಷ್ಟನೆ
Team Udayavani, Aug 30, 2023, 9:08 PM IST
ಕೋಲ್ಕತಾ : ತೃಣಮೂಲ ಕಾಂಗ್ರೆಸ್ ಮಾಜಿ ನಾಯಕ ರಿಯಾಜುಲ್ ಹಕ್ ಅವರು ತಮ್ಮ ಮೊದಲ ವಿವಾಹ ವಾರ್ಷಿಕೋತ್ಸವದಂದು ತಮ್ಮ ಪತ್ನಿಗೆ ಎಕೆ-47 ರೈಫಲ್ ಅನ್ನು ಉಡುಗೊರೆಯಾಗಿ ನೀಡಿದ ನಂತರ ವಿವಾದದಲ್ಲಿ ತಮ್ಮನ್ನು ಸುತ್ತುವರೆದಿದ್ದಾರೆ.
ರಿಯಾಜುಲ್ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ಅವರ ಪತ್ನಿ ಸಬೀನಾ ಯಾಸ್ಮಿನ್ ಎಕೆ -47 ಗನ್ ಹಿಡಿದಿರುವ ಚಿತ್ರವನ್ನು ಹಂಚಿಕೊಂಡ ನಂತರ ಭಾರಿ ಚರ್ಚೆ ಆರಂಭವಾಗಿದೆ. ಸ್ಥಳೀಯ ಬಿಜೆಪಿ ನಾಯಕರು ಮತ್ತು ಸಿಪಿಎಂ ನಾಯಕರು,’ತಾಲಿಬಾನ್ ಆಡಳಿತವನ್ನು ಉತ್ತೇಜಿಸಲಲಾಗುತ್ತಿದೆ’ ಎಂದು ಟೀಕಿಸಿದ ನಂತರ ರಿಯಾಜುಲ್ ಪೋಸ್ಟ್ ಡಿಲೀಟ್ ಮಾಡಿದ್ದಾರೆ.
ತನ್ನ ನಡೆಯನ್ನು ಸಮರ್ಥಿಸಿಕೊಂಡ ರಿಯಾಜುಲ್, ತನ್ನ ಪತ್ನಿ ವಾಸ್ತವವಾಗಿ ‘ಆಟಿಕೆ ಗನ್ ಹಿಡಿದಿದ್ದಾಳೆ. ಯಾವುದೇ ಅಕ್ರಮ ನಡೆದಿಲ್ಲ. ನನ್ನ ವಿರುದ್ಧದ ಆರೋಪ ನಕಲಿಯಾಗಿದ್ದು, ಅದು ನಕಲಿ ಗನ್” ಎಂದು ಹೇಳಿದ್ದಾರೆ.
ಉಪಸಭಾಪತಿ ಮತ್ತು ರಾಮ್‌ಪುರಹತ್‌ನ ಶಾಸಕ ಆಶಿಶ್ ಬಂಡೋಪಾಧ್ಯಾಯ ಅವರ ನಿಕಟವರ್ತಿ ಎಂದು ಹೇಳಲಾದ ಮಾಜಿ ಟಿಎಂಸಿ ನಾಯಕ, “ಅನೇಕ ಜನರು ಅದರ ಗನ್ ಬಗ್ಗೆ ಕೇಳಿದ್ದರಿಂದ ಪೋಸ್ಟ್ ಅನ್ನು ಅಳಿಸಿದ್ದೇನೆ ಎಂದು ಹೇಳಿದ್ದಾರೆ.
ರಿಯಾಜುಲ್ ಒಮ್ಮೆ ತೃಣಮೂಲದ ಅಲ್ಪಸಂಖ್ಯಾತರ ಸೆಲ್‌ನ ರಾಮ್‌ಪುರಹತ್-1 ಬ್ಲಾಕ್‌ನ ಅಧ್ಯಕ್ಷರಾಗಿದ್ದರು ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಆದರೆ, ಕಳೆದೆರಡು ತಿಂಗಳ ಹಿಂದೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಏತನ್ಮಧ್ಯೆ, ರಿಯಾಜುಲ್ ಬಂದೂಕು ಪಡೆದಿರುವ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.