ರಾಖಿ ವಿರುದ್ಧ 10 ಕೋಟಿ ಮೌಲ್ಯದ ಮಾನನಷ್ಟ ಕೇಸು
Team Udayavani, Oct 23, 2018, 6:00 AM IST
ಹೊಸದಿಲ್ಲಿ: ಭಾರತದಲ್ಲಿ ಮಿ ಟೂ ಚಳವಳಿಗೆ ನಾಂದಿ ಹಾಡಿರುವ ಬಾಲಿವುಡ್ ನಟಿ ತನುಶ್ರೀ ದತ್ತಾ ಅವರು ಈಗ ಮತ್ತೂಬ್ಬ ನಟಿ ರಾಖಿ ಸಾವಂತ್ ವಿರುದ್ಧ 10 ಕೋಟಿ ರೂ.ಗಳ ಮಾನಹಾನಿ ಮೊಕದ್ದಮೆ ದಾಖಲಿಸಿದ್ದಾರೆ. ನಟ ನಾನಾ ಪಾಟೇಕರ್ ವಿರುದ್ಧ ತನುಶ್ರೀ ಮಾಡಿದ್ದ ಆರೋಪಗಳಿಗೆ ಈ ಹಿಂದೆ ಪ್ರತಿಕ್ರಿಯಿಸಿದ್ದ ರಾಖಿ, ತನುಶ್ರೀ ಅವರು 2008 ಹಾರ್ನ್ ಓಕೆ ಪ್ಲೀಸ್ ಸಿನಿಮಾದ ಸೆಟ್ನಲ್ಲಿ ಡ್ರಗ್ ಸೇವಿಸಿದ್ದರು ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಾಖಿ ವಿರುದ್ಧ 10 ಕೋಟಿ ರೂ.ಗಳ ಮಾನಹಾನಿ ಮೊಕದ್ದಮೆ ದಾಖಲಿಸಲಾಗಿದೆ ಎಂದು ತನುಶ್ರೀ ಪರ ವಕೀಲರು ತಿಳಿಸಿದ್ದಾರೆ.
ಇದೇ ವೇಳೆ, ಮಿ ಟೂ ಆರೋಪಗಳಿಗೆ ಸಂಬಂಧಿಸಿ ಎಫ್ಐಆರ್ ದಾಖಲಿಸಿಕೊಳ್ಳಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ತ್ವರಿತ ವಿಚಾರಣೆ ಅಗತ್ಯವಿಲ್ಲ ಎಂದು ಸಿಜೆಐ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಏತನ್ಮಧ್ಯೆ, ಕಿರುಕುಳ ಆರೋಪ ಎದುರಿಸುತ್ತಿರುವ ವಿಕಾಸ್ ಬೆಹ್ಲ ಅವರು ಭಾರತೀಯ ಸಿನಿಮಾ ಮತ್ತು ಟಿವಿ ನಿರ್ದೇಶಕರ ಸಂಘದ ನೋಟಿಸ್ಗೆ ಉತ್ತರಿಸಿದ್ದು, ತಮ್ಮ ವಿರುದ್ಧದ ಆರೋಪಗಳೆಲ್ಲ ಸುಳ್ಳು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.