ಕೇಂದ್ರಕ್ಕೆ ಕೋವ್ಯಾಕ್ಸಿನ್ ನನ್ನು 150 ರೂ.ನಂತೆ ನೀಡಲು ಸಾಧ್ಯವಾಗುತ್ತಿಲ್ಲ: ಭಾರತ್ ಬಯೋಟೆಕ್

ಕೇಂದ್ರ ಸರ್ಕಾರಕ್ಕೆ ಪ್ರತಿ ಡೋಸ್ ಗೆ 150 ರೂ. ನಂತೆ ನೀಡುತ್ತಿರುವುದು ಸ್ಪರ್ಧಾತ್ಮಕ ಬೆಲೆಯಲ್ಲ : ಭಾರತ್ ಬಯೋಟೆಕ್ ಸಂಸ್ಥೆ

Team Udayavani, Jun 15, 2021, 5:21 PM IST

Rs 150 per Covaxin dose to govt not sustainable: Bharat Biotech justifies higher price to pvt sector

ನವ ದೆಹಲಿ : ಖಾಸಗಿ ವಲಯದಲ್ಲಿ ಇತರೆ ಕೋವಿಡ್ ಲಸಿಕೆಗಳಿಗಿಂತ ಹೆಚ್ಚಿನ ಬೆಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆಗಳು ಮಾರಾಟವಾಗುತ್ತಿರುವುದರ ಬಗ್ಗೆ ಆರೋಪಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಭಾರತ್ ಬಯೋಟೆಕ್ ಸಂಸ್ಥೆ ಆರೋಪಗಳಿಗೆ ಕಾರಣ ನೀಡುವುದರ ಮೂಲಕ ತನ್ನನ್ನು ತಾನು ಸಮರ್ಥಿಸಿಕೊಂಡಿದೆ.

ಕೇಂದ್ರ ಸರ್ಕಾರಕ್ಕೆ ತನ್ನ ಕೋವ್ಯಾಕ್ಸಿನ್ ಲಸಿಕೆಯ ಪ್ರತಿ ಡೋಸ್ ನನ್ನು  150 ರೂಪಾಯಿಗಳಿಗೆ ನೀಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಾವು ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಬೆಲೆಗೆ ನೀಡುತ್ತಿದ್ದೇವೆ ಎಂದು ಭಾರತ್ ಬಯೋಟೆಕ್ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : 17 ಜನ ಹೊರಗಿನಿಂದ ಬಂದಿದ್ದರಿಂದ ಸಮಸ್ಯೆಯಾಗಿದೆ ಎಂಬ ಈಶ್ವರಪ್ಪ ಮಾತು ಸರಿಯಲ್ಲ : ಪಾಟೀಲ್

ಕೋವ್ಯಾಕ್ಸಿನ್ ಲಸಿಕೆಯನ್ನು ಕೇಂದ್ರ ಸರ್ಕಾರಕ್ಕೆ ಪ್ರತಿ ಡೋಸ್ ಗೆ 150 ರೂ. ನಂತೆ ನೀಡುತ್ತಿರುವುದು ಸ್ಪರ್ಧಾತ್ಮಕ ಬೆಲೆಯಲ್ಲ. ಈ ಬೆಲೆಯಲ್ಲಿ ನಮಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸಂಸ್ಥೆ ಹೇಳಿದೆ.

ಭಾರತದ ಖಾಸಗಿ ವಲಯದಲ್ಲಿ ಇತರ ಕೋವಿಡ್ ಲಸಿಕೆಗಳಿಗೆ ಹೋಲಿಸಿದರೆ ಕೋವ್ಯಾಕ್ಸಿನ್‌ ನ ಲಸಿಕೆಯ ಹೆಚ್ಚಿನ ಬೆಲೆಯನ್ನು ಸಮರ್ಥಿಸಿಕೊಂಡ ಭಾರತ್ ಬಯೋಟೆಕ್ ಸಂಸ್ಥೆ, ಕಡಿಮೆ ಖರೀದಿ ಪ್ರಮಾಣಗಳು, ಹೆಚ್ಚಿನ ವಿತರಣಾ ವೆಚ್ಚಗಳು ಮತ್ತು ಮೂಲಭೂತ ವ್ಯವಹಾರ ಕಾರಣಗಳು ಲಸಿಕೆಯ ಹೆಚ್ಚಿನ ಬೆಲೆಗೆ ಕಾರಣವಾಗಿವೆ ಎಂದು ತಿಳಿಸಿದೆ.

ಕೋವ್ಯಾಕ್ಸಿನ್ ಲಸಿಕೆಯ ಉತ್ಪಾದನೆಗೆ ಹಾಗೂ ಕ್ಲೀನಿಕಲ್ ಪ್ರಯೋಗಗಳಿಗಾಗಿ ಸಂಸ್ಥೆ ಸ್ವತಃ 500 ಕೋಟಿ ವೆಚ್ಚವನ್ನು ಭರಿಸಿದೆ. ಉತ್ಪನ್ನದ  ಅಭಿವೃದ್ಧಿಗೆ ಸಂಸ್ಥೆಯೇ ಪೂರ್ಣವಾಗಿ ಸಂಪನ್ಮೂಲಗಳ ಖರ್ಚು ವೆಚ್ಚಗಳನ್ನು ನೋಡಿಕೊಂಡಿದೆ. ಹಾಗಾಗಿ, ಇಷ್ಟು ಕಡಿಮೆ ಬೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಲಸಿಕೆಯನ್ನು ನೀಡಲು ಕಾರ್ಯ ಸಾಧ್ಯವಾಗುತ್ತಿಲ್ಲ. ಖಾಸಗಿ ವಲಯಗಳಿಗೆ ಆ ಕಾರಣದಿಂದಲೇ ಹೆಚ್ಚಿನ ಬೆಲೆಯಲ್ಲಿ ನೀಡಲಾಗುತ್ತಿದೆ ಎಂದು ಹೇಳಿದೆ.

ಸರಕುಗಳು ಮತ್ತು ಕಚ್ಚಾ ವಸ್ತುಗಳ ಬೆಲೆ, ಉತ್ಪನ್ನಗಳ ವೈಫಲ್ಯಗಳು, ಉತ್ಪನ್ನ ಅಭಿವೃದ್ಧಿ ವಿನಿಯೋಗಗಳು, ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸಂಪೂರ್ಣ ಬಂಡವಾಳ ವೆಚ್ಚಗಳು, ಮಾರಾಟ ಮತ್ತು ವಿತರಣಾ ವೆಚ್ಚಗಳು, ಖರೀದಿ ಸಂಪುಟಗಳು ಮತ್ತು ಇತರ ನಿಯಮಿತ ವ್ಯವಹಾರ ವೆಚ್ಚಗಳ ಜೊತೆಗೆ ಬದ್ಧತೆಗಳ ಇರುವ ಕಾರಣದಿಂದಾಗಿ ಲಸಿಕೆಯ ಬೆಲೆಯಲ್ಲಿ ಸ್ವಲ್ಪ ಜಾಸ್ತಿ ಮಾಡಬೇಕಾಗಿದೆ ಎಂದು ಸಮರ್ಥಿಸಿಕೊಂಡಿದೆ.

ಇನ್ನು, ತನ್ನ ಉತ್ಪನ್ನದ ಶೇಕಡಾ 10 ಕ್ಕಿಂತ ಕಡಿಮೆ ಪ್ರಮಾಣದ ಲಸಿಕೆಗಳು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಲಾಗಿದೆ. ಉಳಿದ ಪ್ರಮಾಣದ ಲಸಿಕೆಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೀಡಲಾಗಿದೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ 150 ರೂ, ನಂತೆ ತನ್ನ ಲಸಿಕೆಯನ್ನು ನೀಡಲು ಸಾಧ್ಯವಾಗುವುದಿಲ್ಲಿ ಎಂದು ಸಂಸ್ಥೆ ಹೇಳಿರುವುದಾಗಿ ವರದಿ ತಿಳಿಸಿದೆ.

ಇತರೆ ರಾಷ್ಟ್ರಗಳ ಉತ್ಪಾದನಾ ಗುತ್ತಿಗೆಯೂ ಕೂಡ ಕಡಿಮೆಯಿದೆ. ಹಾಗಾಗಿ ಲಸಿಕೆಯನ್ನು ಅಷ್ಟು ಕಡಿಮೆ ಬೆಲೆಯಲ್ಲಿ ಪೂರೈಸಲು ಕಾರ್ಯಸಾಧ್ಯವಾಗುವುದಿಲ್ಲವೆಂದು ಸಂಸ್ಥೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಸಿಎಂ ಮುಂದುವರಿಯುವುದು ಬಿಡುವುದು ಆ ಕುಸ್ತಿಯ ಮೇಲೆ ಅವಲಂಬಿತ: ಸತೀಶ್ ಜಾರಕಿಹೊಳಿ

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.