ಹೇಮಂತ್ ಸೋರೆನ್ ಆಪ್ತನ ಹಡಗು ವಶಪಡಿಸಿಕೊಂಡ ಜಾರಿ ನಿರ್ದೇಶನಾಲಯ
Team Udayavani, Jul 27, 2022, 11:04 PM IST
ರಾಂಚಿ: ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ ಆಪ್ತ ಪಂಕಜ್ ಮಿಶ್ರಾ ಅವರಿಗೆ ಸೇರಿರುವ 30 ಕೋಟಿ ರೂ. ಮೌಲ್ಯದ ಹಡಗನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ.
ಹಾಗೆಯೇ ಅಕ್ರಮ ಗಣಿಗಾರಿಕೆಯಲ್ಲಿ ತೆಗೆಯಲಾದ ಕಲ್ಲುಗಳನ್ನು ಸಾಗಿಸಲು ಬಳಸಲಾಗುತ್ತಿದ್ದ ಎಂವಿ ಇನ್‌ಫ್ರಾಲಿಂಕ್ 3 ಹೆಸರಿನ ಒಳನಾಡಿನ ಹಡಗನ್ನೂ ವಶ ಪಡಿಸಿಕೊಳ್ಳಲಾಗಿದೆ. ಈ ಹಡಗನ್ನು ಪರವಾನಗಿ ಇಲ್ಲದಿದ್ದರೂ ಅಕ್ರಮವಾಗಿ ಸಂಚಾರಕ್ಕೆ ಬಳಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪದಲ್ಲಿ ಪಂಕಜ್ ಅವರನ್ನು ಜು.19ರಂದೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಅವರನ್ನು ಸದ್ಯ ಇ.ಡಿ. ವಶದಲ್ಲೇ ಇಟ್ಟುಕೊಂಡು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.