ಏರಿಕೆ ಹಾದಿಯಲ್ಲಿ ಪೆಟ್ರೋಲ್, ಡೀಸೆಲ್ ದರ
Team Udayavani, May 18, 2018, 8:30 AM IST
ಹೊಸದಿಲ್ಲಿ : ಕರ್ನಾಟಕ ಚುನಾವಣೆ ಬಳಿಕ ತೈಲ ಬೆಲೆಯ ಏರಿಕೆಯ ಬಿಸಿ ಮತ್ತೆ ಮುಂದುವರಿದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 80 ಅಮೆರಿಕನ್ ಡಾಲರ್ ಗೆ ಏರಿರುವುದರಿಂದ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.
ರಾಜಧಾನಿ ದಿಲ್ಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 76.06 ರೂ. ಆಗಿದ್ದು, ಇದು 2013ರ ಸೆಪ್ಟಂಬರ್ ನ ಅನಂತರದ ಗರಿಷ್ಠ ಏರಿಕೆಯಾಗಿದೆ. ಇನ್ನು, ಈ ಮಹಾನಗರದಲ್ಲಿ ಡೀಸೆಲ್ ಪ್ರತಿ ಲೀಟರ್ಗೆ 66.79 ರೂ.ಗಳಿಗೆ ಏರಿಕೆಯಾಗಿದೆ. ಪ್ರಮುಖ ನಗರಗಳಾದ ಕೋಲ್ಕತಾ, ಮುಂಬಯಿ, ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಕ್ರಮವಾಗಿ, 78.01ರೂ. , 83.16 ರೂ. ಮತ್ತು 78.16 ರೂ. ಏರಿದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 69.33 ರೂ., 71.12 ರೂ. ಮತ್ತು 70.49 ರೂ.ಗಳಿಗೆ ಏರಿದೆ. ಏತನ್ಮಧ್ಯೆ, 19 ದಿನಗಳಿಗೊಮ್ಮೆ ತೈಲ ಬೆಲೆಯನ್ನು ಪರಿಷ್ಕರಿಸುವ ತನ್ನ ನಿರ್ಧಾರದಿಂದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಹಿಂದೆ ಸರಿದಿದೆ.
ಬೆಂಗಳೂರಿನಲ್ಲಿ: ಇದೇ ವೇಳೆ ಬೆಂಗಳೂರಿನಲ್ಲಿಯೂ ಪ್ರತಿ ಲೀಟರ್ ಪೆಟ್ರೋಲ್ ಗೆ 23 ಪೈಸೆಯಷ್ಟು ಏರಿಕೆಯಾಗಿದೆ. ಹೀಗಾಗಿ ಉದ್ಯಾನ ನಗರಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 76.54 ರೂ. ಆಗಿದೆ. ಡೀಸೆಲ್ ದರ ಕೂಡ 23 ಪೈಸೆಯಷ್ಟು ಏರಿಕೆಯಾಗಿದ್ದು, 67.94 ರೂ.ಗಳಿಗೆ ಪರಿಷ್ಕರಣೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.