ಬಿಹಾರಕ್ಕೆ 500 ಕೋಟಿ ರೂ.
Team Udayavani, Aug 27, 2017, 10:32 AM IST
ಪೂರ್ಣಿಯ: ಪ್ರವಾಹ ಪೀಡಿತ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದ್ದು, ರಾಜ್ಯಕ್ಕೆ ತತ್‌ಕ್ಷಣದ ಪರಿಹಾರವಾಗಿ 500 ಕೋಟಿ ರೂ. ಘೋಷಿಸಿದ್ದಾರೆ. ಜತೆಗೆ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರೊಂದಿಗೆ ಪ್ರಧಾನಿ ವೈಮಾನಿಕ ಸಮೀಕ್ಷೆ ಕೈಗೊಂಡರು. ಬಳಿಕ ಇಬ್ಬರೂ ನಾಯಕರೊಂದಿಗೆ ಸಭೆ ನಡೆಸಿ, ಪರಿಹಾರ ಪ್ಯಾಕೇಜ್ ಘೋಷಿಸಿದರು. ಜತೆಗೆ, ಬಿಹಾರಕ್ಕೆ ಕೇಂದ್ರದ ತಂಡ ಕಳುಹಿಸಿ ಪ್ರವಾಹದಿಂದ ಸಂಭವಿಸಿರುವ ಹಾನಿ ಕುರಿತು ಲೆಕ್ಕ ಮಾಡಿಸುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ಗೋ ಮಾಂಸ ತಿನ್ನೋದು ಸರಿ ಎಂದಾದರೆ ಮೂತ್ರ ಯಾಕೆ ಬೇಡ: ಬಿಜೆಪಿ
Delhi Polls: ದಿಲ್ಲಿ ವಿಧಾನಸಭೆಯ 70 ಸ್ಥಾನಕ್ಕೆ ಬರೋಬ್ಬರಿ 699 ಅಭ್ಯರ್ಥಿಗಳು ಸ್ಪರ್ಧೆ!
Supreme Court: ಟೆಕಿ ಅತುಲ್ ಪುತ್ರನನ್ನು ಅಜ್ಜಿ ಸುಪರ್ದಿಗೆ ನೀಡಲು ಸುಪ್ರೀಂ ನಕಾರ
NRI: ಸಂಸತ್ತಿನಲ್ಲಿ ಎನ್‌ಆರ್‌ಐ ಪ್ರಾತಿನಿಧ್ಯ: ಸ್ಥಾಯಿ ಸಮಿತಿ ಸಭೇಲಿ ಚರ್ಚೆ
Dog’s Revenge: ತನಗೆ ಡಿಕ್ಕಿ ಹೊಡೆದ ಕಾರಿನ ಮೇಲೆ ಸೇಡು ತೀರಿಸಿಕೊಂಡ ಶ್ವಾನ…