ಆರ್‌ಬಿಐ ಫೋಟೋ ಕ್ಲಿಕ್ಕಿಸಿ ಸುಪ್ರೀಂ ಮೆಟ್ಟಿಲೇರಿದವಗೆ 50,000 ರೂ. ದಂ
Team Udayavani, Jul 8, 2017, 9:34 AM IST
ಹೊಸದಿಲ್ಲಿ: ಆರ್‌ಬಿಐ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೇ ಸುಪ್ರೀಂ ಕೋರ್ಟ್ 50,000 ರೂ. ದಂಡ ವಿಧಿಸಿದೆ.
ಆರುಲ್ ಮೋಝಿ ಸೆಲ್ವಾನ್ ಎಂಬಾತ ದಿಲ್ಲಿಯ ಆರ್‌ಬಿಐ ಕಟ್ಟಡದ ಮುಂದೆ ನಿಂತು ಕಟ್ಟಡದ ಫೋಟೋ ತೆಗೆಯಲು ಪ್ರಯತ್ನಿಸುತ್ತಿದ್ದ. ಆ ವೇಳೆ ಭದ್ರತಾ ಸಿಬಂದಿ ಆತನನ್ನು ತಡೆದಿದ್ದರು. ಆತ ಆರ್‌ಬಿಐ ತನ್ನ ಮೂಲಭೂತ ಹಕ್ಕನ್ನು ಚಲಾಯಿಸಲು ಅನುವು ಮಾಡಲಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದ. ಈ ಮನವಿಯನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಜೆ.ಎಸ್. ಖೆಹರ್ ಮತ್ತು ನ್ಯಾ| ಡಿ.ವೈ. ಚಂದ್ರಚೂಡ್ ಅವರನ್ನೊಳಗೊಂಡ ಪೀಠ, ಆತನಿಗೇ 50,000 ರೂ. ದಂಡ ವಿಧಿಸಿದೆ. “ಈ ರೀತಿಯ ಅರ್ಜಿ ಸಲ್ಲಿಸಿ ಸೆಲ್ವಾನ್ ಕೋರ್ಟ್ ಹಾಗೂ ಕಾನೂನು ಪ್ರಕ್ರಿಯೆಗೆ ತೊಡಕುಂಟು ಮಾಡಿದ್ದಾರೆ ಮತ್ತು ನ್ಯಾಯಾಂಗದ ಸಮಯವನ್ನು ಹಾಳು ಮಾಡಿ
ದ್ದಾರೆ. ಇದಕ್ಕಾಗಿ ದಂಡ ವಿಧಿಸಲಾಗಿದೆ’ ಎಂದು ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
African Elephants: ವಂಟಾರಕ್ಕೆ ಆಗಮಿಸಲಿವೆ ಆಫ್ರಿಕಾದ 3 ಆನೆಗಳು
Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ
BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
MUST WATCH
ಹೊಸ ಸೇರ್ಪಡೆ
Special Court: ಎಚ್.ಡಿ.ಕುಮಾರಸ್ವಾಮಿ ಗೈರುಹಾಜರಿಗೆ ಜನಪ್ರತಿನಿಧಿಗಳ ಕೋರ್ಟ್ ಗರಂ
Chennapattana By Poll: ಅಳುವ ಗಂಡಸು, ಯಾವತ್ತೂ ನಂಬಬೇಡಿ: ಸಿಎಂ ಸಿದ್ದರಾಮಯ್ಯ
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
Congress: ಸರಕಾರದಿಂದ ರೈತರಿಗೆ ಕೊನೆಗಾಲ, ಜನರಿಗೆ ವಿನಾಶ ಕಾಲ: ಆರ್.ಅಶೋಕ್
By Election: ಸಿ.ಪಿ.ಯೋಗೇಶ್ವರ್ ಬಾಯಿ ಮಾತಿನ ಭಗೀರಥ: ಎಚ್.ಡಿ.ದೇವೇಗೌಡ ವಾಗ್ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.