ಮಹಿಳಾ ಸುರಕ್ಷತೆಗಾಗಿ ಬೆಂಗಳೂರಿಗೆ 667 ಕೋಟಿ
Team Udayavani, Aug 4, 2018, 11:27 AM IST
ನವದೆಹಲಿ: ಬೆಂಗಳೂರು ಸೇರಿದಂತೆ 8 ನಗರಗಳಲ್ಲಿ ಸುರಕ್ಷತಾ ಕ್ರಮಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಒಟ್ಟು 2,919 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ ಎಂದು ಲೋಕಸಭೆಗೆ ಸರ್ಕಾರ ಮಾಹಿತಿ ನೀಡಿದೆ. ಈ ಪೈಕಿ, ಬೆಂಗಳೂರಿಗಾಗಿ 667 ಕೋಟಿ ರೂ.ಗಳನ್ನು ಒದಗಿಸಲು ಒಪ್ಪಿಗೆ ನೀಡಲಾಗಿದೆ.
ಸಾರ್ವಜನಿಕ ಸ್ಥಳಗಳಲ್ಲಿ ನಿಗಾ ವ್ಯವಸ್ಥೆ, ಕ್ಷಿಪ್ರ ಕಾರ್ಯಪಡೆಗೆ ವಾಹನಗಳು, ಪೊಲೀಸ್ ಠಾಣೆಗಳಲ್ಲಿನ ಮಹಿಳಾ ಸಹಾಯವಾಣಿಗಳಲ್ಲಿ ಎನ್‌ಜಿಒಗಳ ಪ್ರತಿನಿಧಿಗಳ ನೇಮಕ, ಪ್ರಮುಖ ಆಸ್ಪತ್ರೆಗಳಲ್ಲಿ ತುರ್ತು ಸೇವಾ ಘಟಕಗಳ ಸ್ಥಾಪನೆ, ಮಹಿಳೆಯರು ಮತ್ತು ಮಕ್ಕಳ ನೆರವಿಗಾಗಿ ಸಮಗ್ರ ಬೆಂಬಲ ಕೇಂದ್ರ ಸ್ಥಾಪನೆ, ಶಾಲೆಗಳು, ಕಾಲೇಜುಗಳು ಹಾಗೂ ಬಸ್ ನಿಲ್ದಾಣಗಳ ಸಮೀಪ ಪೊಲೀಸ್ ಹೊರಠಾಣೆ ಸ್ಥಾಪನೆ ಮತ್ತಿತರ ಕ್ರಮಗಳು ಇದರಲ್ಲಿ ಸೇರಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.