Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ
Team Udayavani, May 11, 2024, 3:24 PM IST
ಆಂಧ್ರಪ್ರದೇಶ: ಚುನಾವಣೆಗೂ ಮುನ್ನ ಆಂಧ್ರಪ್ರದೇಶದಲ್ಲಿ ದಾಖಲೆ ಇಲ್ಲದ ಕಂತೆ ಕಂತೆ ಹಣಗಳು ಪತ್ತೆಯಾಗುತ್ತಿವೆ. ಅದಕ್ಕೆ ಪುಷ್ಟಿ ಎಂಬಂತೆ ಇನ್ನೇನು ಎರಡು ದಿನಗಳಲ್ಲಿ ಚುನಾವಣೆ ನಡೆಯಲಿದೆ ಎನ್ನುವಷ್ಟರಲ್ಲಿ ಅನಂತಪಲ್ಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಪಲ್ಟಿಯಾದ ವಾಹನದಲ್ಲಿ ಕಂತೆ ಕಂತೆ ಹಣಗಳು ಪತ್ತೆಯಾಗಿದೆ.
ಆಂಧ್ರಪ್ರದೇಶದ ನಲ್ಲಜರ್ಲ ಮಂಡಲದ ಅನಂತಪಲ್ಲಿಯಲ್ಲಿ ಟಾಟಾ ಏಸ್ ವಾಹನವೊಂದು ಲಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ವಸ್ತುಗಳೆಲ್ಲಾ ರಸ್ತೆಗೆ ಎಸೆಯಲ್ಪಟ್ಟಿದೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ವಸ್ತುಗಳನ್ನು ಸರಿಯಾಗಿ ಜೋಡಿಸಲು ನೆರವಾಗಿದ್ದಾರೆ ಈ ವೇಳೆ ಅಲ್ಲಿದ್ದ ಕೆಲ ರಟ್ಟಿನ ಬಾಕ್ಸ್ ನಲ್ಲಿ ಹಣದ ಕಂತೆಗಳು ಪತ್ತೆಯಾಗಿವೆ ಇದರಿಂದ ಗಾಬರಿಗೊಂಡ ಸ್ಥಳೀಯರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ವಿಚಾರ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ತಪಾಸಣೆ ನಡೆಸುವ ವೇಳೆ ರಟ್ಟಿನ ಬಾಕ್ಸ್ ಒಳಗೆ ಕಂತೆ ಕಂತೆ ನೋಟುಗಳು ಕಂಡುಬಂದಿವೆ.
ಬಳಿಕ ಹಣವನ್ನು ವಶಕ್ಕೆ ಪಡೆದ ಪೊಲೀಸರು ಲೆಕ್ಕ ಹಾಕುವ ವೇಳೆ ಅದರಲ್ಲಿ ಏಳು ಕೋಟಿಗೂ ಅಧಿಕ ಮೌಲ್ಯ ಇರುವುದಾಗಿ ಕಂಡುಬಂದಿದೆ.
ಅಪಘಾತದ ವೇಳೆ ವಾಹನ ಚಾಲಕ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚುನಾವಣೆ ಹೊತ್ತಿನಲ್ಲಿ ಹಣದ ವ್ಯವಹಾರಗಳು ಸಾಕಷ್ಟು ನಡೆಯುತ್ತಿದ್ದು ಅಲ್ಲಲ್ಲಿ ಚೆಕ್ ಪೋಸ್ಟ್ ಹಾಕಿ ವಾಹನಗಳ ತಪಾಸಣೆ ನಡೆಸಲಾಗುತ್ತದೆ ಆದರೂ ಕೆಲವು ಕಡೆಗಳಲ್ಲಿ ಪೊಲೀಸರ ಕಣ್ ತಪ್ಪಿಸಿ ಹಣಗಳನ್ನು ಬೇರೆಡೆಗೆ ಸಾಗಿಸುವ ಕಾರ್ಯಗಳು ನಿರಂತರವಾಗಿ ನಡೆಯುತ್ತಿರುತ್ತವೆ.
ಇದನ್ನೂ ಓದಿ: ಹೈದರಾಬಾದ್ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ
#WATCH | Andhra Pradesh: Rs 7 Crores cash, kept in seven boxes, seized in East Godavari district.
A vehicle had overturned after being hit by a lorry at Anantapally in Nallajarla Mandal. Locals noticed that 7 cardboard boxes, containing cash, were being transferred in that… pic.twitter.com/KbQmb5M175
— ANI (@ANI) May 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಇನ್ನು 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: ಇನ್ನು 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು
Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ
Mulki: ಉಗುಳಿದರೆ ದಂಡ; ಹಾಕುವವರು ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.