954 ಕೋಟಿ ರೂ. ಬಾಕಿ ಪಾವತಿ ಮಾಡುವಂತೆ ಕೇಂದ್ರಕ್ಕೆ ಬೇಡಿಕೆ
Team Udayavani, Jun 30, 2018, 6:30 AM IST
ನವದೆಹಲಿ: ಕಳೆದ ಮೂರು ವರ್ಷದಲ್ಲಿ ಅಕ್ಕಿ ಹಾಗೂ ಬೇಳೆಕಾಳುಗಳನ್ನು ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ
ಖರೀದಿಸಿದ್ದಕ್ಕೆ ರಾಜ್ಯದ ಏಜೆನ್ಸಿಗಳಿಗೆ ಕೇಂದ್ರ ಸರ್ಕಾರ 954.26 ಕೋಟಿ ರೂ. ಪಾವತಿ ಬಾಕಿ ಉಳಿಸಿಕೊಂಡಿದ್ದು,
ಶೀಘ್ರ ಪಾವತಿ ಮಾಡಬೇಕು ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್
ಖಾನ್ ಆಗ್ರಹಿಸಿದ್ದಾರೆ.
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ದೆಹಲಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಈ ವಿಚಾರವನ್ನು ಖಾನ್ ಪ್ರಸ್ತಾಪಿಸಿದ್ದಾರೆ.
ರಾಜ್ಯ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಅಕ್ಕಿ, ಬೇಳೆಕಾಳುಗಳನ್ನು ಖರೀದಿ ಮಾಡಿದೆ. ಆದರೆ ಎಲ್ಲ
ದಾಖಲೆಗಳನ್ನು ಸಲ್ಲಿಸಿದರೂ ಏಜೆನ್ಸಿಗಳಿಗೆ ಮಾಡಬೇಕಾದ ಪಾವತಿ ಸಂದಿಲ್ಲ. ಇದರಿಂದಾಗಿ ಭಾರೀ ಪ್ರಮಾಣದಲ್ಲಿ ಬಡ್ಡಿ ಏರಿಕೆಯಾಗಿದೆ. ಶೀಘ್ರದಲ್ಲೇ ಹಣ ಬಿಡುಗಡೆ ಮಾಡಿ ಎಂದು ಖಾನ್ ಕೋರಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಖಾನ್, ಕೇಂದ್ರ ನಡೆಸಿದ ಸಭೆಯಲ್ಲಿ ಭಾಗವಹಿಸಿದ್ದರು.
ಮನೆಗೇ ಪಡಿತರ ತಲುಪಿಸಿ: ಕೇಂದ್ರ ಸರ್ಕಾರ ಸೂಚನೆ
ಹಸಿವಿನಿಂದ ಜನರು ಸಾವನ್ನಪ್ಪುವುದನ್ನು ತಪ್ಪಿಸುವುದಕ್ಕಾಗಿ ಮನೆಗೇ ಪಡಿತರ ಸಾಮಗ್ರಿಗಳನ್ನು ತಲುಪಿಸಿ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಪಡಿತರ ಸಾಮಗ್ರಿಗಳನ್ನು ನೀಡದ್ದರಿಂದಾಗಿಯೇ ಜನರು ಹಸಿವಿನಿಂದ ಸಾವನ್ನಪ್ಪುವ ಸನ್ನಿವೇಶ ನಿರ್ಮಾಣವಾಗಬಾರ
ದು. ಅಲ್ಲದೆ ಸತತ ಮೂರು ತಿಂಗಳವರೆಗೆ ಪಡಿತರವನ್ನು ಪಡೆಯದ ಕುಟುಂಬದ ಮೇಲೆ ಕಣ್ಣಿಡಬೇಕು ಎಂದೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಲಾಗಿದೆ. ಫಲಾನುಭವಿಗಳು ಶ್ರೀಮಂತರಾಗಿದ್ದು, ಅವರಿಗೆ ಪಡಿತರ ಅಗತ್ಯವಿಲ್ಲದಿರಬಹುದು.
ಅಂಥವರ ಪಡಿತರ ಚೀಟಿಯನ್ನು ರದ್ದುಗೊಳಿಸಬೇಕು. ಅಲ್ಲದೆ ಫಲಾನುಭವಿಗಳು ವೃದ್ಧರು ಮತ್ತು ಅಂಗವಿಕಲರೂ
ಆಗಿರಬಹುದು. ಇಂತಹ ಸಂದರ್ಭದಲ್ಲಿ ಮನೆಗೇ ಪಡಿತರವನ್ನು ತಲುಪಿಸಬೇಕು ಎಂದು ಪಾಸ್ವಾನ್ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
MUST WATCH
ಹೊಸ ಸೇರ್ಪಡೆ
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Karkala: ಶಿರ್ಲಾಲು ಪರಿಸರದಲ್ಲಿ ಒಂದೇ ಟವರ್; ಮಾತನಾಡಲು ಮುಖ್ಯ ರಸ್ತೆಗೇ ಬರಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.