ರಾಜಕೀಯಕ್ಕೂ, ಆರ್ಎಸ್ಎಸ್ಗೂ ಸಂಬಂಧವಿಲ್ಲ: ಭಾಗವತ್
Team Udayavani, Jan 18, 2020, 9:33 PM IST
ಮೊರಾದಾಬಾದ್: ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ಕ್ಕೆ ಮತ್ತು ರಾಜಕೀಯಕ್ಕೆ ಯಾವುದೇ ಸಂಬಂಧ ಇಲ್ಲ. ದೇಶದ ನೈತಿಕ, ಸಾಂಸ್ಕೃತಿಕ ಮತ್ತು ಮಾನವೀಯ ಅಂಶಗಳ ಬಗ್ಗೆ ಮಾತ್ರ ಸಂಘಟನೆ ಕೆಲಸ ಮಾಡುತ್ತದೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಶನಿವಾರ ಮೊರಾದಾಬಾದ್ನಲ್ಲಿ ಮಾತನಾಡಿದ ಅವರು, ಸಮಾಜದ ಎಲ್ಲಾ ವರ್ಗಗಳ ಜನರು ಆರ್ಎಸ್ಎಸ್ನ ಭಾಗವಾಗಿದ್ದಾರೆ ಎಂದಿದ್ದಾರೆ.
“60 ವರ್ಷಗಳಿಂದ ದೇಶದ ನೈತಿಕ, ಸಾಂಸ್ಕೃತಿಕ ಮತ್ತು ಮಾನವೀಯ ಅಂಶಗಳ ಬಗ್ಗೆ ಕೆಲಸ ಮಾಡುತ್ತಿದ್ದೇವೆ. ರಾಜಕೀಯಕ್ಕೂ ನಮಗೂ ಸಂಬಂಧವಿಲ್ಲ’ ಎಂದು ಹೇಳಿದ್ದಾರೆ ಭಾಗವತ್. ದೇಶದ 130 ಕೋಟಿ ಮಂದಿಯ ಜತೆಗೆ ಸಂಘಟನೆ ಕೆಲಸ ಮಾಡುತ್ತದೆ. ಬಿಜೆಪಿಯನ್ನು ನಿಯಂತ್ರಿಸುತ್ತೇವೆ ಎಂಬ ವಾದ ಸರಿಯಲ್ಲ ಎಂದು ಪ್ರತಿಪಾದಿಸಿದ್ದಾರೆ.
ಆರ್ಎಸ್ಎಸ್ನ ಶಾಖೆಗೆ ಬಾರದೇ ಇದ್ದರೂ, ರಾಷ್ಟ್ರೀಯ ಏಕತೆಯ ಬಗ್ಗೆ ಚಿಂತನೆ ಇದ್ದವರೂ ಸಂಘಟನೆಯ ಕಾರ್ಯಕರ್ತರೆಂದು ಹೇಳಿಕೊಳ್ಳಬಹುದು ಎಂದರು ಭಾಗವತ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
Delhi: ಜ.15ಕ್ಕೆ ಹೊಸ ಕಟ್ಟಡಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿ ಸ್ಥಳಾಂತರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.