RSS ಪ್ರಭಾವ ನಾಲ್ಕು ದಿಕ್ಕುಗಳಲ್ಲಿ ಹೆಚ್ಚಾಗುತ್ತಿದೆ
Team Udayavani, Nov 15, 2017, 10:53 AM IST
ಪುಣೆ: ಸಂಘದ ಸಿದ್ಧಾಂತಗಳ ಪ್ರಭಾವವು ನಾಲ್ಕು ದಿಕ್ಕುಗಳಲ್ಲಿ ಹೆಚ್ಚಾಗುತ್ತಿದ್ದು, ಈ ಪ್ರಭಾವದಿಂದ ದೇಶದಲ್ಲಿ ಸಾಮಾಜಿಕ ಬದಲಾವಣೆ ಕಾಣುತ್ತಿದೆ. ಆ ಸಾಮಾಜಿಕ ಬದಲಾವಣೆಯ ವೇಗವನ್ನು ಇನ್ನಷ್ಟು ಹೆಚ್ಚಿಸಬೇಕಾದ ಆವಶ್ಯಕತೆಯಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಲ್ಲಿ ಮನವಿ ಮಾಡಿದ್ದಾರೆ.
ಆರ್‌ಎಸ್‌ಎಸ್ ಸಿದ್ಧಾಂತದಿಂದ ಪ್ರೇರಿತವಾಗಿ ಕೆಲಸವನ್ನು ಮಾಡುತ್ತಿರುವ ಮಹಾರಾಷ್ಟ್ರದ ವಿವಿಧ ಸಂಸ್ಥೆಗಳು ಮತ್ತು ಸಂಘಟನೆಗಳ ಕೆಲಸದ ಮೌಲ್ಯಮಾಪನ, ಸಂಘಟನಾತ್ಮಕ ಬೆಳವಣಿಗೆ, ಸೇವಾ ಕಾರ್ಯಗಳ ಸ್ಥಿತಿಗತಿ , ಭವಿಷ್ಯದ ಯೋಜನೆಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು ಚರ್ಚಿಸಲು ಆಯೋಜಿತ ಸಮನ್ವಯ ಸಭೆಯ ಸಮಾರೋಪ ಸಮಾರಂಭದಲ್ಲಿ ಭಾಗವತ್ ಮಾತನಾಡುತ್ತಿದ್ದರು.
ಸಂಘದ ಪರ ಸಮಾಜದ ನಿರೀಕ್ಷೆಗಳು ಹೆಚ್ಚಾಗುತ್ತಿವೆ. ಬೆಳೆಯುತ್ತಿರುವ ಈ ನಿರೀಕ್ಷೆಗಳ ಕಾರಣ ಇಡೀ ಸಂಘಟನೆಯ ಜವಾಬ್ದಾರಿಯೂ ಹೆಚ್ಚಾಗಿದೆ ಎಂದವರು ನುಡಿದಿದ್ದಾರೆ. ನಮ್ಮ ಧರ್ಮ, ಸಂಸ್ಕೃತಿ ಹಾಗೂ ರಾಷ್ಟ್ರೀಯತೆಯ ಬಗ್ಗೆ ಮಕ್ಕಳಲ್ಲಿ ಅರಿವು ಹಾಗೂ ವಿಸ್ವಾಸವನ್ನು ಮೂಡಿಸುವುದು ಪ್ರತಿಯೊಂದು ಹಿಂದೂ ಕುಟುಂಬದ ಮೂಲಭೂತ ಕರ್ತವ್ಯವಾಗಿದೆ ಎಂದು ಸಂಘದ ಸರಸಂಚಾಲಕ ಡಾ| ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಭೆಯಲ್ಲಿ ರಾಜ್ಯದ ವಿವಿಧ ಸಂಸ್ಥೆಗಳು ಮತ್ತು ಸಂಘಟನೆಗಳ ಪ್ರತಿನಿಧಿಗಳು ಹಾಗೂ ಆರ್‌ಎಸ್‌ಎಸ್ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.