ದ್ವೇಷಪೂರಿತ ಭಾಷಣ ವಿರುದ್ಧ ಕ್ರಮ ಅಗತ್ಯ: ಆರ್ಎಸ್ಎಸ್
Team Udayavani, Feb 3, 2022, 10:00 PM IST
ನವದೆಹಲಿ: ದ್ವೇಷ ಪೂರಿತ ಭಾಷಣ ಮಾಡುವವರ ವಿರುದ್ಧ ಕಾನೂನಿನ ಅನ್ವಯ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆರ್ಎಸ್ಎಸ್ನ ಹಿರಿಯ ನಾಯಕ ಇಂದ್ರೇಶ್ ಕುಮಾರ್ ಒತ್ತಾಯಿಸಿದ್ದಾರೆ.
“ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಹರಿದ್ವಾರದ ಧರ್ಮಸಂಸದ್ ಸೇರಿದಂತೆ ಹಲವು ವೇದಿಕೆಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾತ್ಮವಾಗಿ ಮಾತನಾಡಿದ್ದನ್ನು ಸಮರ್ಥಿಸಲು ಸಾಧ್ಯವೇ ಇಲ್ಲ. ಅವರ ವಿರುದ್ಧ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಹಿಂದುತ್ವವಾದಿಗಳೇ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದರು ಎಂಬ ಕಾಂಗ್ರೆಸ್ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಹೇಳಿಕೆಗೆ ಆಕ್ಷೇಪ ಮಾಡಿದ ಅವರು, ಕಾಂಗ್ರೆಸ್ನ ಮಾಜಿ ಅಧ್ಯಕ್ಷರ ಮಾತು ಕೂಡ ದ್ವೇಷಪೂರಿತವಾಗಿದೆ ಎಂದರು.
ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ದ್ವೇಷಪೂರಿತ ಭಾಷಣಕ್ಕೆ ಕಡಿವಾಣ ಹಾಕಬೇಕು. ಎಲ್ಲಾ ಸಮುದಾಯ-ಜಾತಿಗಳ ನಡುವೆ ಭಾÅತೃತ್ವ ಸೃಷ್ಟಿಸುವ ವ್ಯವಸ್ಥೆಯತ್ತ ಮನಸ್ಸು ಮಾಡಬೇಕು ಎಂದು ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.