370ನೇ ವಿಧಿ ರದ್ದು: ಕಣಿವೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ
Team Udayavani, Nov 27, 2019, 8:26 PM IST
ಹೊಸದಿಲ್ಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ವೇಳೆ ಸಮಾಜದಲ್ಲಿ ಶಾಂತಿ ಕಾಯ್ದುಕೊಳ್ಳುವ ಮುನ್ನೆಚ್ಚರಿಕೆ ಕ್ರಮವಾಗಿ 5,000ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ಅವರಲ್ಲಿ 609 ಇನ್ನೂ ಬಂಧನದಲ್ಲಿದ್ದಾರೆ ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ಅಗಸ್ಟ್ 5ರಿಂದ ಪೊಲೀಸ್ ಗುಂಡಿನ ದಾಳಿಯಲ್ಲಿ ಕಣಿವೆಯಲ್ಲಿ ಯಾರೂ ಸಾವನ್ನಪ್ಪಿಲ್ಲ. ಆದರೆ ಕಾನೂನು ಮತ್ತು ಸುವ್ಯವಸ್ಥೆಗಳನ್ನು ಕಾಯ್ದುಕೊಳ್ಳುವ ಪೊಲೀಸರು ನಡೆಸಿದ ಲಾಠಿ ಪ್ರಹಾರದಲ್ಲಿ 197 ಜನರು ಗಾಯಗೊಂಡಿದ್ದಾರೆ. ಶಾಂತಿ ಉಲ್ಲಂಘನೆ, ಕಲ್ಲು ತೂರಾಟಗಾರರು, ದುಷ್ಕರ್ಮಿಗಳು, ಪ್ರತ್ಯೇಕತಾವಾದಿಗಳು ಮತ್ತು ರಾಜಕೀಯ ಕಾರ್ಯಕರ್ತರನ್ನು ಒಳಗೊಂಡಂತೆ ಸುಮಾರು 5,161 ಮಂದಿಯನ್ನು ಬಂಧಿಸಲಾಗಿತ್ತು. ಇವರಲ್ಲಿ 609 ಜನರು ಇನ್ನೂ ಬಂಧನದಲ್ಲಿದ್ದು, ಅದರಲ್ಲಿ ಸುಮಾರು 218 ಜನರು ಕಲ್ಲು ತೂರಾಟಗಾರರು ಎಂದು ಸಚಿವರು ಲಿಖಿತ ಪ್ರಶ್ನೆಗೆ ಉತ್ತರಿಸಿದ್ದಾರೆ.
ಬಂಧನಕ್ಕೊಳಗಾದವರಲ್ಲಿ ಜಮ್ಮು ಮತ್ತು ಕಾಶ್ಮೀರದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಒಮರ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಸೇರಿದ್ದಾರೆ. ಇವರನ್ನು ಶಾಂತಿ ಕಾಪಾಡಲು ಸಹಕಾರವಾಗುವಂತೆ ಬಂಧನದಲ್ಲಿರಿಸಲಾಗಿತ್ತು.
ಜಮ್ಮು ಮತ್ತು ಕಾಶ್ಮೀರ ಸರಕಾರ ವರದಿ ಪ್ರಕಾರ ಆಗಸ್ಟ್ 5ರಿಂದ ಕಾನೂನು ಸುವ್ಯವಸ್ಥೆ ಘಟನೆಗಳಲ್ಲಿ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಯಾವುದೇ ವ್ಯಕ್ತಿ ಸಾವನ್ನಪ್ಪಿಲ್ಲ. ಈ ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಘಟನೆಗಳಲ್ಲಿ 197 ಜನರು ಗಾಯಗೊಂಡಿದ್ದಾರೆ. ಭಯೋತ್ಪಾದನೆ ಸಂಬಂಧಿತ ಘಟನೆಗಳಲ್ಲಿ ಮೂವರು ಭದ್ರತಾ ಪಡೆ ಸಿಬಂದಿ ಮತ್ತು 17 ನಾಗರಿಕರು ಸಾವನ್ನಪ್ಪಿದ್ದು, 129 ಜನರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.