ಇನ್ನು ರಾತ್ರಿಯೂ ಪೋಸ್ಟ್‌ಮಾರ್ಟಂ; ಬ್ರಿಟಿಷರು ಜಾರಿಗೊಳಿಸಿದ್ದ ನಿರ್ಧಾರ ರದ್ದು
Team Udayavani, Nov 16, 2021, 7:10 AM IST
ಹೊಸದಿಲ್ಲಿ: ಇನ್ನು ಮುಂದೆ ಸೂಕ್ತ ರೀತಿಯ ವ್ಯವಸ್ಥೆ ಇರುವ ಆಸ್ಪತ್ರೆಗಳಲ್ಲಿ ಸೂರ್ಯಾಸ್ತದ ಬಳಿಕವೂ ಮೃತದೇಹಗಳ ಮರಣೋತ್ತರ ಪರೀಕ್ಷೆಗೆ ಅವಕಾಶ ಸಿಗಲಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ ಮಾಂಡವಿಯಾ ಟ್ವೀಟ್ ಮಾಡಿದ್ದಾರೆ. ಹತ್ಯೆ, ಆತ್ಮಹತ್ಯೆ, ಅತ್ಯಾಚಾರ, ಸಂಶಯಾತ್ಮಕ ಸಾವು, ಕೊಳೆತ ಶವಗಳು ಪತ್ತೆಯಾದ ಪ್ರಕರಣಗಳಿಗೆ ಈ ನಿಯಮ ಅನ್ವಯವಾಗುವುದಿಲ್ಲ.
ಸಾಮಾನ್ಯ ಸಾವಿನ ಪ್ರಕರಣಗಳಲ್ಲಿ ಸೂರ್ಯಾಸ್ತದ ಬಳಿಕವೂ ಪೋಸ್ಟ್ ಮಾರ್ಟಂಗೆ ಅವಕಾಶ ನೀಡಿದರೆ ಅಂಗಾಂಗ ದಾನಗಳಿಗೆ ಸಹಾಯ ವಾಗಲಿದೆ. ರಾತ್ರಿ ವೇಳೆ ಮರಣೋತ್ತರ ಪರೀಕ್ಷೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಮನವಿಗಳು ಬಂದಿರುವ ಹಿನ್ನೆಲೆಯಲ್ಲಿ ಬ್ರಿಟಿಷರು ಜಾರಿ ಗೊಳಿಸಿದ್ದ ಪದ್ಧತಿಗೆ ಮುಕ್ತಾಯ ಹಾಡಲು ತೀರ್ಮಾನಿಸಲಾಗಿದೆ ಎಂದು ಮನಸುಖ ಮಾಂಡವಿಯಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಜನರಿಗೆ ಮರಣೋತ್ತರ ಪರೀಕ್ಷೆಯ ಪದ್ಧತಿ ಯಲ್ಲಿ ಸದ್ಯ ಇರುವ ನಿಯಮಗಳಿಂದ ಅನನುಕೂಲ ವಾಗುತ್ತಿತ್ತು. ಹೀಗಾಗಿ ಅವುಗಳನ್ನು ರದ್ದುಪಡಿಸುವ ನಿಟ್ಟಿನಲ್ಲಿ ಮೋದಿ ಸರಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ
ಸಭೆಯಲ್ಲಿ ನಿರ್ಧಾರ
ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾ ಲಯ ಸೂರ್ಯಾಸ್ತದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ನೀಡುವ ಬಗ್ಗೆ ಪರಿ ಶೀಲನೆ ನಡೆಸಿತ್ತು. ಈಗಾಗಲೇ ಕೆಲವು ವೈದ್ಯಕೀಯ ಸಂಸ್ಥೆಗಳು ರಾತ್ರಿ ಮರಣೋ ತ್ತರ ಪರೀಕ್ಷೆ ನಡೆಸುತ್ತಿವೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ವೈದ್ಯಕೀಯ ಕ್ಷೇತ್ರದಲ್ಲಿ ತಾಂತ್ರಿಕವಾಗಿ ಸಾಕಷ್ಟು ಅಭಿವೃದ್ಧಿ ಸಾಧಿಸಲಾಗಿರುವ ಹಿನ್ನೆಲೆಯಲ್ಲಿ ಮತ್ತು ರಾತ್ರಿಯ ವೇಳೆ ಕೂಡ ಸಾಕಷ್ಟು ಒಳ್ಳೆಯ ಬೆಳಕು ಲಭ್ಯವಿರುವ ಕಾರಣ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ನೀಡಬಹುದು ಎಂದು ತೀರ್ಮಾನಿಸಲಾಗಿತ್ತು.
ವೀಡಿಯೋ ಚಿತ್ರೀಕರಣ
ರಾತ್ರಿ ವೇಳೆ ನಡೆಯುವ ಎಲ್ಲ ರೀತಿಯ ಮರಣೋತ್ತರ ಪರೀಕ್ಷೆಗಳ ವೀಡಿಯೋ ಚಿತ್ರೀಕರಣ ನಡೆಸಲು ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಇಲ್ಲಿದೆ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಇಲ್ಲಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.